nammatumakuru

    Subscribe to Updates

    Get the latest creative news from FooBar about art, design and business.

    What's Hot

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026
    Facebook Twitter Instagram
    ಟ್ರೆಂಡಿಂಗ್
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    • ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್
    • 80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!
    • ಹಾಸನದಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿ ಪರಿಶೀಲನೆ
    • ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!
    • ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ
    • ಗ್ರಾಮೀಣ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೂ ಶೇ.7.5ರ ವಿಶೇಷ ಮೀಸಲಾತಿ ವಿಸ್ತರಿಸಲು ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಲು ಒತ್ತಾಯಿಸಿ ಅಹೋರಾತ್ರಿ ಧರಣಿ
    ರಾಜ್ಯ ಸುದ್ದಿ December 29, 2023

    ಮಾಯಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು, ಸಿಬ್ಬಂದಿಗಳನ್ನು ನೇಮಿಸಲು ಒತ್ತಾಯಿಸಿ ಅಹೋರಾತ್ರಿ ಧರಣಿ

    By adminDecember 29, 2023No Comments2 Mins Read
    thuruvekere

    ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು ಮತ್ತು ಸಿಬ್ಬಂದಿಗಳನ್ನು ನೇಮಿಸುವಂತೆ ಹಾಗೂ ಆಸ್ಪತ್ರೆಯ ಅವ್ಯವಸ್ಥೆಯನ್ನು ಆರೋಪಿಸಿ ಗ್ರಾಮಸ್ಥರು ಅಹೋರಾತ್ರಿ ಧರಣಿ ಮೂಲಕ ಸರ್ಕಾರಕ್ಕೆ ಒತ್ತಾಯಿಸಿದರು.

    ಈ ವೇಳೆ ಧರಣಿಯನ್ನು ಉದ್ದೇಶಿಸಿ ಯುವ ಮುಖಂಡ ರಮೇಶ್ ಮಾತನಾಡಿ, ಹಲವಾರು ವರ್ಷಗಳಿಂದ ಮಾಯಸಂದ್ರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಖಾಯಂ ವೈದ್ಯರು ಮತ್ತು ಸಿಬ್ಬಂದಿಗಳನ್ನು ಸರ್ಕಾರ ನೇಮಕ ಮಾಡಿಲ್ಲ, ಹೋಬಳಿಯ ಹತ್ತಾರು ಹಳ್ಳಿಗಳಿಂದ ನೂರಾರು ಬಡವರು, ರೈತರು, ಸಾರ್ವಜನಿಕರು ಪ್ರತಿನಿತ್ಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದು, ತುರ್ತು ಸಂದರ್ಭದಲ್ಲಿ ಆಂಬುಲೆನ್ಸ್ ಸೇವೆ ಹಾಗೂ ತುರ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ, ಆಸ್ಪತ್ರೆಯಲ್ಲಿ ಕೆಲವು ಔಷಧಿಗಳು ದೊರೆಯುತ್ತಿಲ್ಲ, ರಕ್ತಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿಗಳಿಲ್ಲ, ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಬೇಕು, ಹೀಗಾದರೆ ಬಡವರ ಕಥೆ ಏನು? ಆಸ್ಪತ್ರೆಯಲ್ಲಿ ಕೆಲವು ಸಿಬ್ಬಂದಿಗಳು ರೋಗಿಗಳೊಂದಿಗೆ, ಸಾರ್ವಜನಿಕರೊಂದಿಗೆ ನಿರ್ಲಕ್ಷದಿಂದ ವರ್ತಿಸುತ್ತಾರೆ ಎಂದು ಗಂಭೀರವಾಗಿ ಆರೋಪಿಸಿದರು.

    ದಲಿತ ಯುವ ಮುಖಂಡ ಜಯಣ್ಣ ಮಾತನಾಡಿ, ಮಾಯಸಂದ್ರ ಹೋಬಳಿಯಾದ್ಯಂತ ಹಲವಾರು ಖಾಸಗಿ ಕ್ಲಿನಿಕ್ ಗಳು ಮತ್ತು ಲ್ಯಾಬ್ ಗಳು ದಿನೇ ದಿನೇ ಹೆಚ್ಚುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ, ಅತಿ ದುಬಾರಿ ದರದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ನಿಗದಿತ ಚಿಕಿತ್ಸೆ ಸಿಗದ ಕಾರಣ, ಬಡವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವುದು ಕಷ್ಟಕರವಾಗಿದೆ. ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದರೆ, ಬೇರೊಂದು ಕಡೆಗೆ ಶಿಫಾರಸು ಮಾಡುತ್ತಾರೆ, ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆ ದೊರೆಯುತ್ತಿಲ್ಲ, ಅಲ್ಲದೆ ಬೀದಿ ಬದಿ ರಸ್ತೆಗಳಲ್ಲಿ ಪ್ಲಾಸ್ಟಿಕ್ ಬಳಸುವ ಮೂಲಕ ಆಹಾರವನ್ನು ತಯಾರಿಸುತ್ತಿರುವುದು, ರಾಸಾಯನಿಕದಂತಹ ವಸ್ತುಗಳನ್ನು ಬಳಸಿ ಜಂಕ್ ಫುಡ್ ಗಳನ್ನು ತಯಾರಿಸುತ್ತಿರುವುದು ಕಂಡುಬಂದಿದ್ದು, ಇದರ ಕ್ರಮಕ್ಕೆ ಮುಂದಾಗಲು ಸಂಬಂಧಪಟ್ಟ ಆರೋಗ್ಯ ಇಲಾಖೆಯ ಅಧಿಕಾರಿಗಳು ವಿಫಲರಾಗಿದ್ದಾರೆ. ಆಸ್ಪತ್ರೆಯಲ್ಲಿ ಪ್ರಸ್ತುತ ಔಷಧಿಗಳು ದೊರೆಯುವ ಬಗ್ಗೆ ನಾಮಫಲಕವನ್ನು ಅಳವಡಿಸಿಲ್ಲ ಮಾಹಿತಿ ನೀಡುವುದಿಲ್ಲ, ಹಿರಿಯರಿಗೆ, ಅಂಗವಿಕಲರಿಗೆ ಮೂಲಭೂತ ಸೌಲಭ್ಯಗಳನ್ನು ದೊರಕಿಸುವಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ನಿರ್ಲಕ್ಷ ತೋರುವ ಮೂಲಕ ಬೇಜವಾಬ್ದಾರಿ ತೋರಿಸುವ ಕೆಲವು ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಹಾಗೂ ಅನಧಿಕೃತವಾಗಿ ನಡೆಸುತ್ತಿರುವ ಖಾಸಗಿ ಕ್ಲಿನಿಕ್, ಲ್ಯಾಬ್ ಗಳು, ಪ್ಲಾಸ್ಟಿಕ್ ಬಳಕೆಯ ಆಹಾರ ತಯಾರಿಕೆ ಕುರಿತಂತೆ, ಗಂಭೀರವಾದ ಕ್ರಮ ಕೈಗೊಳ್ಳಲು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದರು.

    ತಡರಾತ್ರಿ ಧರಣೀಯ ಸುದ್ದಿ ತಿಳಿಯುತ್ತಿದ್ದಂತೆ ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಪ್ರಿಯಾ ರವರು ಧರಣಿ ಸ್ಥಳಕ್ಕೆ ಆಗಮಿಸಿ ಗ್ರಾಮಸ್ಥರ ದೂರನ್ನು ಸ್ವೀಕರಿಸಿ ಸ್ಥಳದಲ್ಲಿ ಸಂಬಂಧಪಟ್ಟ ದೂರುಗಳಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯೊಂದಿಗೆ ಕ್ರಮದ ಬಗ್ಗೆ ಹಿಂಬರಹವನ್ನು ಸಹ ನೀಡಿದರು, ತದನಂತರ ಪ್ರತಿಭಟನಾಕಾರರು ಧರಣಿಯನ್ನು ಕೈಬಿಟ್ಟರು.

    ಈ ಸಂದರ್ಭದಲ್ಲಿ ಯುವ ಮುಖಂಡರಾದ ಮಂಜುನಾಥ್, ಕರಿಬಸವಯ್ಯ, ಗೋವಿಂದಪ್ಪ, ಕುಮಾರ್, ಶೇಖರ್ ,ಹನುಮಂತು, ವಿನಯ್, ಸೇರಿದಂತೆ ಮುಂತಾದ ಯುವಕರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ಸುರೇಶ್ ಬಾಬು ಎಂ.

    admin
    • Website

    Related Posts

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ

    September 12, 2026

    ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನಗಳು ಪೂರ್ಣಗೊಂಡಿರುವ ಬೆನ್ನಲ್ಲೇ, ಸರ್ಕಾರದ ವಿರುದ್ಧ ವಿಧಾನಸಭೆಯ ವಿರೋಧ…

    ಇ.ಡಿ.ಗೆ ದೂರು ನೀಡಿದವರು ಯಾರೆಂದು ನನಗೆ ತಿಳಿದಿದೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    September 12, 2026

    ಪಂಚ ಗ್ಯಾರಂಟಿ ಯೋಜನೆಗಳು ನನ್ನ ಅಧ್ಯಕ್ಷತೆಯಲ್ಲೇ ರೂಪುಗೊಂಡವು: ಡಿ.ಕೆ. ಶಿವಕುಮಾರ್

    September 12, 2026

    80ರ ದಶಕದ AI ಫೋಟೋ ಟ್ರೆಂಡ್‌: ಸಾರ್ವಜನಿಕರಿಗೆ ಸೈಬರ್ ತಜ್ಞರು, ಪೊಲೀಸರ ಎಚ್ಚರಿಕೆ!

    September 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.