NEET ಮತ್ತು UGC NET ಪರೀಕ್ಷೆ ನಡೆದ ಅಕ್ರಮದ ಆರೋಪದ ಬಗ್ಗೆ ಈಗಾಗಲೇ ಭಾರೀ ಚರ್ಚೆಯಾಗುತ್ತಿದೆ. ಇನ್ನು ಕೆಲವರು ಕೇಂದ್ರ ಸರ್ಕಾರವನ್ನು ಟೀಕೆ ಮಾಡಿದ್ದಾರೆ. ಇದೀಗ ಕೇಂದ್ರ ಇದಕ್ಕೆಲ್ಲ ಉತ್ತರ ನೀಡಬೇಕು ಎಂದು ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ತಂದಿದೆ.
ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಒಂದು ಮಹತ್ವ ನಿರ್ಧಾರವನ್ನು ತೆಗೆದುಕೊಂಡಿದೆ.ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ ಕಾಯಿದೆಯನ್ನು ಜಾರಿಗೆ ತರಲು ಅಧಿಸೂಚನೆ ನೀಡಿದೆ.
ಕಾನೂನಿನಲ್ಲಿ ಒಬ್ಬ ವ್ಯಕ್ತಿ ಅಥವಾ ವ್ಯಕ್ತಿಗಳ ಗುಂಪು ಪರೀಕ್ಷಾ ಪ್ರಾಧಿಕಾರ, ಸೇವಾ ಪೂರೈಕೆದಾರರು ಅಥವಾ ಯಾವುದೇ ಇತರ ಸಂಸ್ಥೆ ಸೇರಿದಂತೆ ಸಂಘಟಿತ ಅಪರಾಧವನ್ನು ಮಾಡಿದರೆ ಅವರಿಗೆ 5ರಿಂದ 10ವರ್ಷದ ವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಹಾಗೂ 1 ಕೋಟಿ ರೂ. ದಂಡ ವಿಧಿಸಲಾಗುವುದು ಎಂದು ಹೇಳಲಾಗಿದೆ.
ತರಬೇತಿ ಏಜೆಂಟ್ ಅಥವಾ ಕೋರ್ಸ್ ಸೆಂಟರ್ ಗಳು ಪೇಪರ್ ಸೋರಿಕೆ ಅಪರಾಧದಲ್ಲಿ ಭಾಗಿಯಾಗಿರುವುದು ಕಂಡುಬಂದಲ್ಲಿ ಆ ಸಂಸ್ಥೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ನಿಬಂಧನೆಗಳನ್ನು ಹೊಂದಿದೆ ಹಾಗೂ ಪರೀಕ್ಷೆಯ ಪ್ರಮಾಣಾನುಗುಣವಾದ ವೆಚ್ಚವನ್ನು ಸಹ ಅದರಿಂದ ವಸೂಲಿ ಮಾಡಲಾಗುತ್ತದೆ ಎಂದು ಈ ಕಾನೂನಿನಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


