ಅನೇಕ ಕಾರಣಗಳಿಂದಾಗಿ ‘ಕೊರಗಜ್ಜ’ ಸಿನಿಮಾ ಕೌತುಕ ಮೂಡಿಸಿದೆ. ಈ ಸಿನಿಮಾ ಸೆಟ್ಟೇರಿದಾಗಿನಿಂದಲೂ ಸಾಕಷ್ಟು ಅಡೆತಡೆಗಳು ಉಂಟಾದರೂ ಅವುಗಳನ್ನೆಲ್ಲ ನಿವಾರಿಸಿಕೊಂಡು ಚಿತ್ರತಂಡ ಮುನ್ನುಗ್ಗುತ್ತಿದೆ. ಆದರೀಗ ಅಚ್ಚರಿ ಎಂಬಂತೆ ಈ ಕೊರಗಜ್ಜ ಚಿತ್ರೀಕರಣದ ವೇಳೆ ಅಗೋಚರವಾದ ಶಕ್ತಿಯೊಂದು ಕಾಣಿಸಿದೆ.
ಚಿತ್ರೀಕರಣದ ವೇಳೆ ನಿರ್ದೇಶಕ ಸುಧೀರ್ ಅತ್ತಾವರ್ ರನ್ನು ಅಗೋಚರ ಶಕ್ತಿಯೊಂದು ಬಲವಾಗಿ ತಳ್ಳಿ ಏಳೆಂಟು ಗಜ ದೂರಕ್ಕೆಸೆಯಲ್ಪಟ್ಟ ಘಟನೆ ನಡೆದಿದ್ದು, ಚಿತ್ರ ತಂಡವನ್ನು ಬೆಚ್ಚಿಬೀಳಿಸಿದೆ. ಎಲ್ಲೂ ಎಡವಿ ಬೀಳದೆ, ಜಾರದೆ ಇದ್ದರೂ, ಏಕಾಏಕಿ ಬಲವಾಗಿ ತಳ್ಳಿದಂತೆ ವೇಗ ಪಡೆದುಕೊಂಡು ನಿರ್ದೇಶಕರು ಎಸೆಯಲ್ಪಟ್ಟ ವಿಲಕ್ಷಣ ಘಟನೆ, ಸುಮಾರು ಮುನ್ನೂರಕ್ಕಿಂತಲೂ ಹೆಚ್ಚಿದ್ದ ಚಿತ್ರತಂಡದ ಎದುರಲ್ಲೇ ಘಟನೆ ನಡೆದಿದೆ.
ಬಹು ನಿರೀಕ್ಷಿತ ಕೊರಗಜ್ಜ ಚಿತ್ರದ ಚಿತ್ರೀಕರಣವು ಕೊಚ್ಚಿ ಮತ್ತು ಮುಂಬೈನ ಪೋಸ್ಟ್ ಪ್ರೊಡಕ್ಷನ್ ನಡೆಯುತ್ತಿತ್ತು. ಈ ವೇಳೆ ದೈವ ನರ್ತನದ ಪ್ರಮುಖ ದ್ರಶ್ಯವೊಂದನ್ನು ಶೂಟ್ ಮಾಡುತ್ತಿದ್ದು, ನಿನ್ನೆ ಮಧ್ಯರಾತ್ರಿ ನೂರಾರು ಉರಿವ ಪಂಜುಗಳನ್ನು ಧರಿಸಿಕೊಂಡ ಕೇರಳದ ತೆಯ್ಯಂ ಕಲಾವಿದರ ಮತ್ತು ಮಾಸ್ ಮಾದ ಅವರ ಮೈ ನವಿರೇಳಿಸುವ ಸಾಹಸ ಸನ್ನಿವೇಶವೊಂದನ್ನು, ನಿರ್ದೇಶಕ ಸುಧೀರ್ ಅತ್ತಾವರ್ ಮೂರನೇ ಬಾರಿ ಮರು ಚಿತ್ರೀಕರಿಸುತ್ತಿದ್ದರು. ಬೆಂಗಳೂರಿನ ಹೊರವಲಯದ ಕನಕಪುರ ರಸ್ತೆಯ ಕಗ್ಗಲಿ ಹಳ್ಳಿಯಲ್ಲಿ ಹಾಕಿದ್ದ ಆದ್ದೂರಿ ಸೆಟ್ ನಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ಡಿ ಒ ಪಿ ಮನೋಜ್ ಪಿಳ್ಳೈ ಚಿತ್ರೀಕರಿಸುತ್ತಿದ್ದಾಗ, ನಿರ್ದೇಶಕ ಸುಧೀರ್ ಅತ್ತಾವರ್ ರನ್ನು ಅಗೋಚರ ಶಕ್ತಿಯೊಂದು ಬಲವಾಗಿ ತಳ್ಳಿ ಏಳೆಂಟು ಗಜ ದೂರಕ್ಕೆಸೆಯಲ್ಪಟ್ಟಿದೆ.
ಘಟನೆಯ ಸನ್ನಿವೇಷವನ್ನು ವಿವರಿಸುತ್ತಿದ್ದ ಸಮಯದಲ್ಲಿ ನಿರ್ದೇಶಕರನ್ನು ಒಂದೇ ಸಮನೆ ಅಗೋಚರ ಶಕ್ತಿ ಬಲವಾಗಿ ದೂಡಿದಂತಾಗಿ, ತನ್ನನ್ನು ನಿಭಾಯಿಸಿಕೊಳ್ಳದೆ ನಿರ್ದೇಶಕರು ಸುಮಾರು ದೂರಕ್ಕೆ ಎಸೆಯಲ್ಪಟ್ಟದ್ದಾರೆ. ಇದನ್ನು ಖ್ಯಾತ ನಟಿ ಶ್ರತಿ ಹಾಗೂ ಅನೇಕ ಕಲಾವಿದರು ಕಣ್ಣಾರೆ ಕಂಡಿದ್ದಾರೆ. ನಿರ್ದೇಶಕರು ದೊಡ್ಡ ಮಟ್ಟದ ಗಾಯಗಳಿಂದ ಪಾರಾಗಿರುವುದನ್ನು ಕೊರಗಜ್ಹ ದೈವವೇ ನಿರ್ದೇಶಕರನ್ನು ಕಾಪಾಡಿದೆ ಎಂದು ನಟಿ ಶ್ರುತಿ ಹೇಳಿದ್ದಾರೆ.
‘ಕೊರಗಜ್ಜ’ ಚಿತ್ರಕ್ಕೆ ಹಿನ್ನೆಲೆ ಸಂಗೀತದ ಜೊತೆಗೆ ಎಲ್ಲ ಹಾಡುಗಳನ್ನು ಗೋಪಿ ಸುಂದರ್ ಅವರು ಕಂಪೋಸ್ ಮಾಡುತ್ತಿದ್ದಾರೆ. ಬಹುಕೋಟಿ ಬಜೆಟ್ ನಲ್ಲಿ ತ್ರಿವಿಕ್ರಮ ಸಪಲ್ಯ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ‘ತ್ರಿವಿಕ್ರಮ ಸಿನಿಮಾಸ್ ’ ಹಾಗೂ ‘ಸಕ್ಸಸ್ ಫಿಲ್ಮ್ಸ್’ ಬ್ಯಾನರ್ ಮೂಲಕ ‘ಕೊರಗಜ್ಜ’ ಚಿತ್ರ ತಯಾರಾಗುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಲಿದ್ದು, ಅರರಾರ್ ಪುಷ್ಪ’ ಮುಂತಾದ ಯಶಸ್ವಿ ಸಿನಿಮಾಗಳ ತಂತ್ರಜ್ಞರು ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಚಿತ್ರದಲ್ಲಿ ಬಾಲಿವುಡ್ನ ಹಿರಿಯ ನಟ ಕಬೀರ್ ಬೇಡಿ ಅಭಿನಯಿಸುತ್ತಿರುವುದು ವಿಶೇಷ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296