ತುಮಕೂರು: ವೃದ್ದೆಯೊಬ್ಬರು ಅಪಘಾತದಲ್ಲಿ ಗಾಯಗೊಂಡು ತಕ್ಷಣ ಸೂಕ್ತ ಚಿಕಿತ್ಸೆ ದೊರೆಯದೆ ರಸ್ತೆಯಲ್ಲೇ ನರಳಾಡಿದ ಘಟನೆ ತುಮಕೂರಿನ ಚಿಕ್ಕನಾಯನಹಳ್ಳಿಯಲ್ಲಿ ಪಟ್ಟಣದಲ್ಲಿ ನಡೆದಿದೆ.
ಗೌರಮ್ಮ ಎಂಬುವರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ.
ಇದರಿಂದಾಗಿ ಅವರ ಕಾಲಗಳ ಮೇಲೆ ಲಾರಿಯ ಚಕ್ರ ಹರಿದ ಪರಿಣಾಮ ಗಂಭೀರವಾದ ಗಾಯಗಳಾಗಿದ್ದು. ಅಲ್ಲದೆ ತಕ್ಷಣ ಚಿಕಿತ್ಸೆ ದೊರೆಯದೆ ಸುಮಾರು ಅರ್ಥ ಗಂಟೆಗೂ ಹೆಚ್ಚು ಕಾಲ ನರಳಾಡಿದರು.
ಕಾಲು ಮುರಿದುಕೊಂಡು ರಕ್ತದ ಮಡುವಿನಲ್ಲಿ ಒದ್ದಾದುತ್ತಿದ್ದ ಹೃದಯ ಚಿಕಿತ್ಸೆ ಲಭಿಸಲೆಂದು ಸಾರ್ವಜನಿಕರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದ್ರೆ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿಯೇ ಈ ಘಟನೆ ಸಂಭವಿಸಿದರು ಕೂಡ ಸ್ಥಳಕ್ಕೆ ಅರ್ಧಗಂಟೆ ಗಂಟೆಯಾದರೂ ಆಂಬ್ಯುಲೆನ್ಸ್ ಬರ್ಲಿಲ್ಲ.
ಇದರಿಂದಾಗಿ ರೊಚ್ಚಿಗೆದ್ದ ಸ್ಥಳೀಯರು ಆಟೋದಲ್ಲೇ ಅಜ್ಜಿಯನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಿಕೊಟ್ಟರು. ತಾಲೂಕು ಆಸ್ಪತ್ರೆಯಲ್ಲಿ ಗಾಯಗೊಂಡ ಗೌರಮ್ಮಗೆ ಚಿಕಿತ್ಸೆ ನೀಡಲಾಗಿದೆ.
ಕೊಡ್ಲಾಪುರ ಗ್ರಾಮದ ಅಜ್ಜಿ ಗೌರಮ್ಮ ರಸ್ತೆ ದಾಟುವಾಗ ಅಪಘಾತ ಸಂಭವಿಸಿದೆ. ಸರ್ಕಾರಿ ಶಾಲೆ ಮುಂಭಾಗ ವೇಗವಾಗ ಬಂದ ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿತ್ತು.
ಸಿಮೆಂಟ್ ಮಿಕ್ಸರ್ ಲಾರಿ ಚಾಲಕನ ಅಜಾಗರೂಕತೆಯಿಂದ ವೃದ್ಧೆಯ ಎಡಗಾಲು ತುಂಡಾಗಿದೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.