ದಾವಣಗೆರೆ: ಕಲುಷಿತ ನೀರು ಸೇವಿಸಿದ್ದ ವೃದ್ಧೆಯೊಬ್ಬರು ಅಸ್ವಸ್ಥಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹುಣದಘಟ್ಟ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದ 7 ಜನರು ಆಸ್ಪತ್ರೆಗೆ ದಾಖಲಾಗಿದ್ದರು. 7 ಜನರಲ್ಲಿ ಚಂದ್ರಮ್ಮ (60) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಆಗಸ್ಟ್ 21 ರಂದು ಚಂದ್ರಮ್ಮ ಮೆಗ್ಗನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ವಾಂತಿ ಬೇಧಿ, ಜ್ವರದಿಂದ ಬಳಲುತ್ತಿದ್ದರು. ಇಂದು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ.
ಇನ್ನುಳಿದ ಆರು ಜನರು ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗಿದ್ದಾರೆ. ಕುಡಿಯುವ ನೀರಿನ ಪೈಪ್ ಹೊಡೆದು ಚರಂಡಿ ನೀರು ಮಿಶ್ರಣವಾದ ಹಿನ್ನಲೆ ನೀರು ಕಲುಷಿತಗೊಂಡಿತ್ತು. ಘಟನೆಯಾದ ನಂತರ ಗ್ರಾಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜಾಗೃತಿ ಮೂಡಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q