ಮೈಸೂರು: ಮೈಸೂರಿನ ತಿ. ನರಸೀಪುರ ತಾಲೂಕಿನ ಮರಡೀಪುರ ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ರಾಹುಲ್ (17) ಮೃತ ದುರ್ದೈವಿಯಾಗಿದ್ದಾರೆ.
ಸ್ನೇಹಿತರ ಜತೆ ಕಾವೇರಿ ನದಿಯಲ್ಲಿ ಈಜಲು ತೆರಳಿದ ರಾಹುಲ್ ನೀರಿನಿಂದ ಹೊರಬರಲು ಆಗದೆ ಮುಳುಗಿ ಮೃತಪಟ್ಟಿದ್ದಾನೆ. ಜತೆಯಲ್ಲಿದ್ದ ಸ್ನೇಹಿತರು ರಕ್ಷಣೆಗೆ ತೆರಳಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿದ ರಾಹುಲ್ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ.
ಮಹದೇಶ್ವರ ದೇವಸ್ಥಾನದ ಬಳಿ ಇರುವ ಹೊಳೆಯಲ್ಲಿ ನೀರಿಗೆ ಇಳಿದು ಆಟ ಆಡುವಾಗ ನೀರಿನಲ್ಲಿ ಮುಳುಗಿದ್ದು, ವಿಷಯ ತಿಳಿದ ಕೂಡಲೇ ಹೊಳೆ ಬಳಿ ಬಂದ ಪೋಷಕರು ನೀರಿನಿಂದ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಸ್ಥಳಕ್ಕೆ ತಲಕಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296