ತುಮಕೂರು: ಅಪರಿಚಿತ ವಾಹನ ಹರಿದು ಯುವಕನ ಕಾಲು ಅಪ್ಪಚ್ಚಿಯಾಗಿರುವ ಘಟನೆ ನೆಲಹಾಳು ಬಳಿಯ ರಾಷ್ಟ್ರೀಯ ಹೆದ್ದಾರಿ ನಂ48 ರಲ್ಲಿ ನಡೆದಿದೆ.
ತುಮಕೂರು ತಾಲೂಕಿನ ನೆಲಹಾಳ್ ನಲ್ಲಿ ಈ ಘಟನೆ ನಡೆದಿದ್ದು, ತೋವಿನಕೆರೆಯ ಪದ್ಮರಾಜು ಎಂಬ ಯುವಕ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಡಿಕೆ ಮಂಡಿ ನಡೆಸುತ್ತಿದ್ದ ಪದ್ಮರಾಜು ಶಿರಾದಿಂದ ಗ್ರಾಮಕ್ಕೆ ಹಿಂತಿರುಗುವಾಗ ಘಟನೆ ನಡೆದಿದೆ. ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.
ವಾಹನ ಹರಿದು ಯುವಕ ಗಂಭೀರವಾಗಿ ಗಾಯಗೊಂಡಿದ್ದ ವೇಳೆ ತಕ್ಷಣದಲ್ಲೇ ಆ್ಯಂಬುಲೆನ್ಸ್ ಸಿಗದೇ ಪರದಾಡುವಂತಾಗಿತ್ತು. ಇದರಿಂದಾಗಿ ಯುವಕನ ಸ್ಥಿತಿ ಗಂಭೀರ ಸ್ಥಿತಿಗೆ ಹೋಗಿತ್ತು.
ಸದ್ಯ ಯುವಕ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW