ಚಿತ್ರದುರ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಆವರಣದಲ್ಲಿ ಅನಧಿಕೃತವಾಗಿ ಇಟ್ಟಿರುವ ಪೆಟ್ಟಿಗೆ ಅಂಗಡಿಗಳನ್ನು ತೆರವುಗೊಳಿಸುವಂತೆ ಹಿರಿಯೂರು ತಾಲ್ಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಿರಿಯೂರು ತಹಶೀಲ್ದಾರವರಿಗೆ ಮನವಿ ಸಲ್ಲಿಸಿತು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ತಾಲ್ಲೂಕು ಕಚೇರಿಯ ಆವರಣದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಭವನದ ಆವರಣದಲ್ಲಿ ಅನಧಿಕೃತವಾಗಿ ಪೆಟ್ಟಿಗೆ ಅಂಗಡಿಗಳನ್ನು ಇಟ್ಟಿದ್ದು, ಇದು ಕಾನೂನು ಬಾಹಿರವಾಗಿರುತ್ತದೆ ಎಂದು ಸಂಘಟನೆ ದೂರಿದೆ.
ಈಗಾಗಲೇ ಸದರಿ ಕಟ್ಟಡದಲ್ಲಿ ಮೂರು ಕೊಠಡಿಗಳು, ಒಂದು ಪೆಟ್ಟಿಗೆ ಅಂಗಡಿ ಹಾಗೂ ಟೀ ಹೋಟೆಲ್ ಗಳು , ಇವರಿಂದ ಪ್ರತಿ ತಿಂಗಳು ನೌಕರರ ಸಂಘದ ಭವನದವರು ಬಾಡಿಗೆ ಪಡೆಯುತ್ತಿದ್ದಾರೆ. ಹಿರಿಯೂರು ತಾಲ್ಲೂಕಿನಲ್ಲಿ ಸುಮಾರು ಎರಡು ಸಾವಿರ ಸರ್ಕಾರಿ ನೌಕರರು ಇದ್ದು, ಇವರಿಂದ ಪ್ರತಿ ವರ್ಷಕ್ಕೆ ರೂ 200 ರೂ. ಪಡೆದರೂ ಇವರಿಂದಲೇ ವರ್ಷಕ್ಕೆ ನಾಲ್ಕು ಲಕ್ಷ ಹಣ ಸಂಘಕ್ಕೆ ಹೋಗುತ್ತಿದೆ. ಆದರೂ ಅತಿಯಾಸೆಯಿಂದ ಇರುವ ಸ್ವಲ್ಪ ಜಾಗದಲ್ಲಿ ಮತ್ತೆ ಮೂರು ಪೆಟ್ಟಿಗೆ ಅಂಗಡಿಗಳನ್ನು ಇಟ್ಟುಕೊಳ್ಳಲು ನೀಡಲಾಗಿದೆ ಎಂದು ಸಂಘಟನೆಯ ಮುಖಂಡರು ಆರೋಪಿಸಿದ್ದಾರೆ.
ಈ ಅಂಗಡಿಗಳಿಂದಾಗಿ ದಿನನಿತ್ಯ ತಾಲ್ಲೂಕು ಕಚೇರಿಗೆ ಬರುವಂತಹ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದರ ಜೊತೆಗೆ ಪಕ್ಕದಲ್ಲಿಯೇ ಇರುವ ಎಸ್ ಬಿ ಐ ಬ್ಯಾಂಕ್ ನ ಭದ್ರತೆಗೂ ಧಕ್ಕೆಯಾಗಿದ್ದು, ಕಳ್ಳರಿಗೆ ದಾರಿ ಮಾಡಿಕೊಟ್ಟಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಪೆಟ್ಟಿಗೆಗಳನ್ನು ಶೀಘ್ರದಲ್ಲೇ ತೆರವುಗೊಳಿಸುವಂತೆ ಸೂಕ್ತ ಕ್ರಮ ಕೈತೆಗೆದುಕೊಳ್ಳಬೇಕಾಗಿದೆ. ಶೀಘ್ರವಾಗಿ ಕ್ರಮವನ್ನು ಕೈಗೊಳ್ಳದೆ ಇದ್ದಲ್ಲಿ , ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರರವರಿಗೆ ಮನವಿ ಪತ್ರದ ಮೂಲಕ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷರಾದ , ರಾಮಚಂದ್ರ ಕೆ., ಹಿರಿಯೂರು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್, ತಾಲ್ಲೂಕು ಕಾರ್ಯಾಧ್ಯಕ್ಷರಾದ ರಾಘವೇಂದ್ರ ಆರ್. ಮತ್ತು ತಾಲ್ಲೂಕು ಉಪಾಧ್ಯಕ್ಷರಾದ ಶ್ರೀನಿವಾಸ್ ಹಾಗೂ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy