ಸೋಲದೇವನಹಳ್ಳಿಯಲ್ಲಿ ಅನೈತಿಕ ಸಂಬಂಧಕ್ಕೆ ಅಡ್ಡಿ ಎಂದು ಪತ್ನಿಯೇ ಪ್ರಿಯಕರನ ಜೊತೆ ಸೇರಿಕೊಂಡು ಗಂಡನ ಕೊಲೆ ಮಾಡಿರುವ ಘಟನೆ ನಡೆದಿದೆ.
ದಾಸೇಗೌಡ (48) ಕೊಲೆಯಾದ ವ್ಯಕ್ತಿ. ನಾಪತ್ತೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರಿಗೆ ಸಿನಿಮಾ ರೀತಿಯಲ್ಲಿ ನಡೆದ ಈ ಕೊಲೆ ರಹಸ್ಯ ಬಯಲಾಗಿದೆ. ದಾಸೇಗೌಡ ನಾಪತ್ತೆಯಾಗಿದ್ದ ಬಗ್ಗೆ ಸೋಲದೇವನಹಳ್ಳಿಯಲ್ಲಿ ಪತ್ನಿ ದೂರು ದಾಖಲಿಸಿದ್ದಳು.
ರಾಮನಗರ ಗ್ರಾ. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಸೇಗೌಡನ ಮೃತದೇಹ ಪತ್ತೆಯಾಗಿದ್ದು, ದಾಸೇಗೌಡನ ಪತ್ನಿ ಸೇರಿ ಇಬ್ಬರನ್ನು ವಿಚಾರಣೆ ನಡೆಸಿದಾಗ ನಿಜ ಹೊರ ಬಂದಿದೆ. ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ ಒಂ ಮೃತದೇಹವನ್ನು ಸೋಲದೇವನಹಳ್ಳಿ ಫಾರ್ಮ್ ಹೌಸ್‌ನಿಂದ ಕಾರಿನಲ್ಲಿ ಸಾಗಟ ಮಾಡಿದ್ದು, ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ಮೋರಿಯಲ್ಲಿ ಎಸೆದಿದ್ದಾರೆ.
ಕೊಲೆ ಮಾಡಲು ಬಳಸಿದ್ದ ಹಗ್ಗವನ್ನು ಬೇರೆಡೆ ಎಸೆದಿದ್ದು, ಸಾಕ್ಷ್ಯ ಸಿಗದಂತೆ ಒಂದೊಂದು ಕಡೆ ವಸ್ತುಗಳು ಎಸೆದಿದ್ದಾರೆ. 35 ವರ್ಷದ ಜಯ 16 ವರ್ಷದ ಹಿಂದೆ ದಾಸೇಗೌಡನನ್ನ ಮದುವೆಯಾಗಿ ಇಬ್ಬರು ಮಕ್ಕಳು ಇದ್ದರು. ಗಂಡ ಹೆಂಡತಿ ಗಲಾಟೆ ಮಾಡಿಕೊಳ್ಳುತ್ತಿದ್ದರು. ಗಂಡ ಮನೆಯಲ್ಲಿ ಇಲ್ಲದಾಗ ಯುವಕ ಮನೆಗೆ ಬಂದು ಹೋಗುತ್ತಿದ್ದ. ಪತ್ನಿಯ ಅನೈತಿಕ ಸಂಬಂಧ ಬಗ್ಗೆ ಪತಿ ದಾಸೇಗೌಡನಿಗೆ ಅನುಮಾನ ಬಂದಿತ್ತು. ರಾತ್ರಿ ಗಲಾಟೆ ವೇಳೆ ಪ್ರಿಯಕರನಿಗೆ ಕರೆ ಮಾಡಿ ಗಂಡ ಬೈಯುವುದನ್ನು ಕೇಳಿಸಿಕೊಂಡಿದ್ದ ಪತ್ನಿ ಪ್ರಿಯಕರನ ಕರೆಸಿ ದನದ ಕೊಟ್ಟಿಗೆಯಲ್ಲಿದ್ದ ಹಗ್ಗ ತಂದು ಕೊಲೆ ಮಾಡಿದ್ದಾರೆ.
ಮೊಬೈಲ್ ಕರೆ ಆಧಾರದ ಮೇಲೆ ಸೋಲದೇವನಹಳ್ಳಿ ಪೊಲೀಸರು ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


