ಸವದತ್ತಿ : ಸವದತ್ತಿ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರು ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಪಾಸಣೆಗಾಗಿ ಚೆನ್ನೈಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಕ್ಕರೆ ಕಾಯಿಲೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಚೆನ್ನೈಯಲ್ಲಿ ಚಿಕಿತ್ಸೆ ಪಡೆದಿದ್ದ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದರು.
ಹಾಗಾಗಿ, ಚೆನ್ನೈಯಲ್ಲಿ ಐಎಎಸ್ ಅಧಿಕಾರಿಯಾಗಿರುವ ಮಾಮನಿಯವರ ಸಹೋದರ ರಾಜಣ್ಣ ಮಾಮನಿ ಪುತ್ರನ ಮನೆಯಲ್ಲಿದ್ದು ವಿಶ್ರಾಂತಿ ಪಡೆದು ಮತ್ತೊಮ್ಮೆ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಮತ್ತೊಮ್ಮೆ ತಪಾಸಣೆ ನಡೆಸಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದೆಂದು ವೈದ್ಯರು ತಿಳಿಸಿದ್ದಾರೆ. ಶಾಸಕರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಮಾಮನಿ ಕುಟುಂಬದ ಮೂಲಗಳು ತಿಳಿಸಿವೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy