ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆಗೆ ಬಾಂಬ್ ಬೆದರಿಕೆ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ 32 ವರ್ಷದ ಎಂಜಿನಿಯರ್ ಅನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ವಡೋದರ ನಿವಾಸಿ ವಿರಾಲ್ ಶಾ ಎಂದು ಗುರುತಿಸಲಾಗಿದೆ. ಗುಜರಾತ್ ನಲ್ಲಿರುವ ವಿರಾಲ್ ಶಾ ನಿವಾಸದಿಂದ ಮುಂಬೈ ಪೊಲೀಸರ ಅಪರಾಧ ವಿಭಾಗದ ಅಧಿಕಾರಿಗಳು ನೆನ್ನೆ ಬೆಳಿಗ್ಗೆ ಅವರನ್ನು ಬಂಧಿಸಿದ್ದಾರೆ.
ಪೋಸ್ಟ್ ನಂತರ ಪೊಲೀಸರು ಮದುವೆ ಕಾರ್ಯಕ್ರಮದ ಭದ್ರತೆಯನ್ನು ಹೆಚ್ಚಿಸಿದ್ದಾರೆ ಎನ್ನಲಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜುಲೈ 12 ರಂದು ನಡೆದ ಮದುವೆ ಸಮಾರಂಭದಲ್ಲಿ ಏಷ್ಯಾದ ಶ್ರೀಮಂತ ವ್ಯಕ್ತಿ ಮುಕೇಶ್ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿ ಫಾರ್ಮಾ ಉದ್ಯಮಿಗಳಾದ ವೀರೇನ್ ಮತ್ತು ಶೈಲಾ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾದರು.
ವ್ಯಾಪಕ ಕಳವಳವನ್ನು ಉಂಟುಮಾಡಿದ ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ಬಗ್ಗೆ ಸಂಪೂರ್ಣ ತನಿಖೆಯ ನಂತರ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA