ಬೆಂಗಳೂರು: ಕೋವಿಡ್ ನಿಂದ ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಆರೋಗ್ಯ ಮತ್ತು ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
ಕಂದಾಯ ಇಲಾಖೆಯ ರಾಜ್ಯ ವಿಪತ್ತು ನಿರ್ವಹಣೆಯ ವತಿಯಿಂದ ನ್ಯಾಪನಲ್ ಕಾಲೇಜು ಮೈದಾನದಲ್ಲಿ ಕೋವಿಡ್ ನಿಂದದ ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿ ಮಾತನಾಡಿದ ಅವರು, ಕೊವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಬಿಪಿಎಲ್ ಕುಟುಂಬ ಸದಸ್ಯರಿಗೆ 1 ಲಕ್ಷ ರೂ. ಪರಿಹಾರ ನೀಡುವ ಯೋಜನೆಗೆ 300 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೇಂದ್ರ ಸರ್ಕಾರದ ರೂ.50,000 ಗಳ ಪರಿಹಾರವನ್ನು ಡಿಬಿಟಿ ಮಾಡಲಾಗಿದೆ. ಪರಿಹಾರ ನೀಡುವ ಮೂಲಕ ಸರ್ಕಾರ ಈ ಕುಟುಂಬಗಳ ಜೊತೆ ಇದೆ ಎಂಬ ಭರವಸೆಯನ್ನು ನೀಡಲಾಗಿದೆ ಎಂದು ತಿಳಿಸಿದರು.
ಕರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿ ಆರೋಗ್ಯವಾಗಿದ್ದಂತಹ ಕುಟುಂಬದ ಸದಸ್ಯರು ಹಠಾತ್ತನೇ ಮೃತಪಟ್ಟಲ್ಲಿ ಬಹಳ ದು:ಖ ಕಾಡುತ್ತದೆ. ಈ ಸಾಂಕ್ರಾಮಿಕ ಬಹಳ ಕುಟುಂಬಗಳನ್ನು ಅನಾಥರನ್ನಾಗಿ ಮಾಡಿದೆ. ಆಧುನಿಕ ವೈದ್ಯಕೀಯ ಚಿಕಿತ್ಸೆಯ ಕಾಲಘಟ್ಟದಲ್ಲಿ ಕರೋನಾ ಸಾಂಕ್ರಾಮಿಕ ಯಾರು ಊಹಿಸಿರಲಾರದಂತಿತ್ತು ಎಂದು ಅವರು ಇದೇ ವೇಳೆ ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy