ಫುಡ್ ಪಾಯಿಸನ್ ನಿಂದ ಮೂರು ಅನಾಥ ಮಕ್ಕಳು ಸಾವನ್ನಪ್ಪಿ ಎಂಟು ಮಕ್ಕಳು ಗಂಭೀರವಾಗಿ ಅಸ್ವಸ್ಥರಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ತಿರಪ್ಪೂರ್ ಅನಾಥಾಶ್ರಮದಲ್ಲಿ ಈ ಘಟನೆ ನಡೆದಿದೆ. ಇದೀಗ ಅನಾಥಾಶ್ರಮ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಾಗಿದ್ದು ಈ ಕುರಿತು ತಿರಪ್ಪೊರ್ ಜಿಲ್ಲಾಧಿಕಾರಿ ವಿನೀತ್ ಮಾಹಿತಿ ನೀಡಿದ್ದಾರೆ.
ರಾತ್ರಿ ಆಹಾರ ಸೇವಿಸಿದ ಬಳಿಕ ಕೆಲವರಿಗೆ ವಾಂತಿ ಮತ್ತು ಭೇದಿಯಾಗಿದ್ದು, ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಮಧ್ಯೆ ಆಸ್ಪತ್ರೆಯಲ್ಲಿ ಮೂವರು ಬಾಲಕರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy