ತಿಪಟೂರು: ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಅಖಿಲ ಭಾರತೀಯ ಅಂಚೆನೌಕರರ ಸಂಘ ಹಾಗೂ ಗ್ರಾಮೀಣ ಅಂಚೆ ನೌಕರರ ಸಂಘದಿಂದ ತಿಪಟೂರು ನಗರದ ನಗರದ ಸಭಾ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ನೌಕರರು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ನಿರತರನ್ನ ಉದೇಶಿಸಿ ಅಖಿಲಭಾರತೀಯ ಅಂಚೆ ನೌಕರರ ಸಂಘದ ಕಾರ್ಯದರ್ಶಿ ವಿಶ್ವೇಶ್ವರಯ್ಯ ಮಾತನಾಡಿ, ಕೇಂದ್ರ ಸರ್ಕಾರ ಅಂಚೆ ಇಲಾಖೆಯನ್ನು ಖಾಸಗೀಕರಣ ಮಾಡಲು ಹೊರಟಿರುವುದು ಖಂಡನೀಯ. ಅಂಚೆ ಇಲಾಖೆ ಸುಧಾರಣೆಗಾಗಿ ಕಮಲೇಶ್ ಚಂದ್ರ ವರದಿಯನ್ನು ಜಾರಿಗೊಳಿಸಬೇಕು, ಎನ್ ಪಿಎಸ್ ಪದ್ದತಿ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಜಿಡಿಎಸ್ ನೌಕರರಿಗೆ ವೇತನ ಹೆಚ್ಚಳ ಮಾಡಬೇಕು. ಬ್ರಾಂಚ್ ಆಫೀಸ್ ನಲ್ಲಿ ಇರುವ ನೆಟ್ ವರ್ಕ್ ಸಮಸ್ಯೆ ಸರಿಪಡಿಸಬೇಕು. ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಅಂಚೆ ನೌಕರರ ಸಂಘದ ಸಹ ಕಾರ್ಯದರ್ಶಿ ವಿಜಯ್ ಕುಮಾರ್ , ದಸ್ತಗೀರ್ ಮುಂತಾದವರು ಉಪಸ್ಥಿತರಿದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5