ಬೆಂಗಳೂರು: ಕರಾವಳಿ ಮೂಲದ ನಿರೂಪಕಿ, ನಟಿ ಅನುಶ್ರೀ ಅವರು ಕೊಡಗು ಮೂಲದ ರೋಷನ್ ಜೊತೆಗೆ ಶೀಘ್ರವೇ ವಿವಾಹವಾಗಲಿದ್ದಾರೆ.
ವರದಿಗಳ ಪ್ರಕಾರ ಆ.28ರಂದು ಅನುಶ್ರೀ ಹಾಗೂ ರೋಷನ್ ಸಪ್ತಪದಿ ತುಳಿಯಲಿದ್ದಾರೆ. ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ಈ ಮದುವೆ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 10:56 ಶುಭ ಮುಹೂರ್ತದಲ್ಲಿ ಅನುಶ್ರಿ ರೋಷನ್ ಅವರ ಕೈ ಹಿಡಿಯಲಿದ್ದಾರೆ. `ನೀವೆಲ್ಲ ಕೇಳುತ್ತಿದ್ದ ಏಕೈಕ ಪ್ರಶ್ನೆಗೆ ಈಗ ಉತ್ತರ. ಏಕಾಂಗಿ ನಿರೂಪಣೆಯ ನಂತರ ಅರ್ಧಾಂಗಿ ಆಗುವ ಹೊಸ ಮನ್ವಂತರ’ ಎಂದು ಅನುಶ್ರೀ ಆಮಂತ್ರಣ ಪತ್ರಿಕೆಯಲ್ಲಿ ಬರೆಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC