ಬೆಂಗಳೂರು :ಮಳೆ ಬಂದ ವೇಳೆ ಸವಾರರು ಅಂಡರ್‌ಪಾಸ್ ಕೆಳಗೆ ವಾಹನ ನಿಲ್ಲಿಸಿ, ಆಶ್ರಯ ಪಡೆಯುತ್ತೇವೆ. ಆದರೆ, ಇನ್ನು ಅಂಡರ್‌ಪಾಸ್‌ನಲ್ಲಿ ವಾಹನ ನಿಲ್ಲಿಸಿದರೆ, ದಂಡ ಹಾಕುವುದಾಗಿ ಬೆಂಗಳೂರು ಸಂಚಾರ ಜಂಟಿ ಪೊಲೀಸ್ ಕಮಿಷನರ್ B.R.ರವಿಕಾಂತೇಗೌಡ ಖಡಕ್ ಎಚ್ಚರಿಕೆ ನೀಡಿದ್ದಾರೆ. ‘ಅಂಡರ್‌ಪಾಸ್‌ಗಳಲ್ಲಿ ವಾಹನ ನಿಲ್ಲಿಸುವುದರಿಂದ ಸಂಚಾರಕ್ಕೆ ಸಮಸ್ಯೆಯಾಗಿ, ಟ್ರಾಫಿಕ್ ಜಾಮ್ ಆಗುತ್ತಿದೆ. ಹೀಗಾಗಿ, ವಾಹನ ನಿಲ್ಲಿಸುವ ಮಾಲೀಕರ ವಿರುದ್ಧ ದಂಡ, ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.
ಬೆಂಗಳೂರು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಎಚ್ಚರಿಕೆ ನೀಡಿದ್ದಾರೆ. ನಾಯಂಡಹಳ್ಳಿ, ವಿಂಡ್ಸನ್ ಮ್ಯಾನರ್ ಮಳೆ ಬಂತೆಂದು ಅಂಡರ್‌ಪಾಸ್‌ನಲ್ಲಿ ವಾಹನ ನಿಲ್ಲಿಸಿಸಲಾಗುತ್ತಿದ್ದು, ಇದರಿಂದ ಟ್ರಾಫಿಕ್ಜಾಮ್ ಉಂಟಾಗುತ್ತಿತ್ತು.
ಇಂತಹ ಸಂದರ್ಭದಲ್ಲಿ ಹೆವಿ ವೆಹಿಕಲ್ಸ್ ಪಾಸ್ ಆದಾಗ ಅಪಘಾತವಾಗುತ್ತದೆ. ಹೀಗಾಗಿ ಇನ್ಮುಂದೆ ಅಂಡರ್‌ಪಾಸ್‌ನಲ್ಲಿ ವಾಹನ ನಿಲ್ಲಿಸದಂತೆ ಸೂಚನೆ ನೀಡಲಾಗಿದೆ. ಕೆಳಸೇತುವೆಯಲ್ಲಿ ಗಾಡಿ ನಿಲ್ಲಿಸಿ ಟ್ರಾಫಿಕ್ಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದೆಂದು ಅವರು ಹೇಳಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy