ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ ಮತ್ತೆ ಭೂಕಂಪ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಪೋರ್ಟ್‌ಬ್ಲೇರ್‌ನಲ್ಲಿ ಇಂದು ಬೆಳಿಗ್ಗೆ 5.57ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿ ನೀಡಿದೆ.
ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಪೋರ್ಟ್ ಬ್ಲೇರ್, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ 215 ಕಿಮೀ ಇಎಸ್‌ಇ ದೂರದಲ್ಲಿ ಮುಂಜಾನೆ 5.57 ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಕೊಲ್ಲಿಯಿಂದ 44 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಭೂಕಂಪದಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS), ಭೂಕಂಪನದ ತೀವ್ರತೆ: 5.0,
ಕಾಲಮಾನ 05-07-2022 ರಂದು ಬೆಳಿಗ್ಗೆ 05:57:04 IST,
ಲ್ಯಾಟ್: 10.54 ಮತ್ತು ಉದ್ದ: 94.36, ಆಳ: 44 ಕಿಮೀ , ಸ್ಥಳ: 215 ಕಿಮೀ, ಪೋರ್ಟ್‌ಬ್ಲೇರ್ ಮತ್ತು ಇಎಸ್‌ಇ ಮತ್ತು ನಿಕೋಬಾರ್ ದ್ವೀಪ, ಭಾರತ.” ಎಂದು ಮಾಹಿತಿ ನೀಡಿದೆ.
ಗಮನಾರ್ಹವಾಗಿ ಇದಕ್ಕೂ ಮುನ್ನ ಸೋಮವಾರ (ಜುಲೈ 4) ಮಧ್ಯಾಹ್ನ 3.02 ನಿಮಿಷಗಳ ಸುಮಾರಿಗೆ ಪೋರ್ಟ್ ಬ್ಲೇರ್‌ನ ಆಗ್ನೇಯಕ್ಕೆ 256 ಕಿಮೀ ದೂರದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.4 ರಷ್ಟು ದಾಖಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲೂ ಕಂಪಿಸಿದ ಭೂಮಿ:
ಸೋಮವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲೂ 3.2 ತೀವ್ರತೆಯ ಭೂಕಂಪನದ ಅನುಭವವಾಗಿದೆ ಎಂದು ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರಾಡಳಿತ ಪ್ರದೇಶದ ದೋಡಾ ಜಿಲ್ಲೆಯಲ್ಲಿ ಮಧ್ಯಾಹ್ನ 12:12 ಕ್ಕೆ ಕಡಿಮೆ ತೀವ್ರತೆಯ ಭೂಕಂಪನದ ಅನುಭವವಾಗಿದ್ದು, ಭೂಕಂಪದ ಕೇಂದ್ರಬಿಂದು ಐದು ಕಿಲೋಮೀಟರ್ ಆಳದಲ್ಲಿದೆ. ಅದಾಗ್ಯೂ, ಪ್ರದೇಶದಲ್ಲಿ ಯಾವುದೇ ರೀತಿಯ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB