ಆಂಧ್ರಪ್ರದೇಶ: 16 ವರ್ಷದ ಬಾಲಕಿಯ ಮನೆಗೆ ನುಗ್ಗಿದ ಮಾಜಿ ಗೆಳೆಯ ಆಕೆಯನ್ನು ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕಡಪ ಜಿಲ್ಲೆಯ ಬದ್ವೇಲ್ ಹೊರವಲಯದಲ್ಲಿ ನಡೆದಿದೆ.
ಕಡಪ ಜಿಲ್ಲೆಯ ಬದ್ವೇಲ್ ಹೊರವಲಯದಲ್ಲಿ ಜೆ ವಿಘ್ನೇಶ್ ಅಪ್ರಾಪ್ತ ಬಾಲಕಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ನಡೆಸಿರುವ ಆರೋಪಿಯಾಗಿದ್ದಾನೆ.
ಶನಿವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಾಲಕಿಯನ್ನು ಕಡಪ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ಬಾಲಕಿ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾಳೆ.
ಪೊಲೀಸರ ಪ್ರಕಾರ, ವಿಘ್ನೇಶ್ ಮತ್ತು ಅಪ್ರಾಪ್ತ ಬಾಲಕಿ ಪರಸ್ಪರ ಸಂಬಂಧದಲ್ಲಿದ್ದರು, ಅಲ್ಲದೇ ಹಲವು ಬಾರಿ ಬಾಲಕಿ ಮೇಲೆ ಈತ ಅತ್ಯಾಚಾರ ಎಸಗಿದ್ದನು ಎನ್ನಲಾಗಿದೆ. ಆದರೆ ಆರೋಪಿ ಕೆಲವು ತಿಂಗಳ ಹಿಂದೆ ಅವಳೊಂದಿಗೆ ಬೇರ್ಪಟ್ಟು ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದನು.
ಇದರಿಂದ ನೊಂದ ಬಾಲಕಿ ತನ್ನನ್ನು ಮದುವೆಯಾಗು ಎಂದು ಪದೇ ಪದೇ ಕೇಳಿಕೊಂಡಿದ್ದರಿಂದ ರೊಚ್ಚಿಗೆದ್ದು ಬಾಲಕಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ್ದಾನೆ. ಸದ್ಯ ಆರೋಪಿಯ ವಿರುದ್ಧ ಪೋಕ್ಸೋ ಸೇರಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q