ತುಮಕೂರು: ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆ ಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟ್ ಗೆಲ್ಲಿಸಲಿಲ್ಲ ಅಂದ್ರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತೆ ಎಂದು ಗುಬ್ಬಿ ಶಾಸಕ ಶ್ರೀನಿವಾಸ್ ತಿಳಿಸಿದ್ದಾರೆ.
ತಿಪಟೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಪರ ಪ್ರಚಾರದ ಭಾಷಣದ ವೇಳೆ ಮಾತನಾಡಿದ ಅವರು, ಬಡವರ ಪರ ಕೆಲಸ ಮಾಡುವ ಸಿದ್ದರಾಮಯ್ಯನನ್ನು ಉಳಿಸುವ ಕೆಲಸ ನಾವೆಲ್ಲ ಮಾಡಬೇಕು.
ಎಲ್ಲಾ ಕಾರ್ಯಕರ್ತರು ಸಿದ್ದರಾಮಯ್ಯ ನನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದರು. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅಹಿಂದ ವರ್ಗದ ಮಾಸ್ ಲೀಡರ್. ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿದೆ. ಆರ್ಥಿಕ ಸಂಕಷ್ಟದ ನಡುವೆಯೂ ಗ್ಯಾರಂಟಿಗಳ ಯಶಸ್ವಿಯಾಗಿ ಜಾರಿ ಮಾಡಿದ್ದಾರೆ. ಒಂದು ವೇಳೆ ಸರ್ಕಾರದ ಪರವಾಗಿ ಜನಮತ ಬರಲಿಲ್ಲ ಎಂದರೆ ಸಿಎಂ ಬದಲಾವಣೆ ಆಗಬಹುದು ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ
ಸಿಎಂ ಬದಲಾವಣೆಯ ಆತಂಕ ಸೃಷ್ಟಿಸಿ ಅಹಿಂದ ವರ್ಗಗಳನ್ನು ಮತ ಭದ್ರಪಡಿಸಿಕೊಳ್ಳುವ ತಂತ್ರಗಾರಿಕೆ ಇದಾಗಿರಬಹುದೆ ಎಂಬ ಪ್ರಶ್ನೆ ಎದ್ದು ನಿಂತಿದೆ. ಇದಕ್ಕೆ ಪೂರಕವೆಂಬಂತೆ ಹೆಚ್ಚು ಸ್ಥಾನ ಬರಲಿಲ್ಲ ಎಂದರೆ ಸರ್ಕಾರ ನಡೆಸಲು ಯಾವ ನೈತಿಕ ಕತೆಯಿದೆ ಎಂಬ ಹೇಳಿಕೆ ನೀಡಿದ್ದರು ಸಹಕಾರ ಸಚಿವ ಕೆ.ಎನ್ ರಾಜಣ್ಣ. ಹೀಗಾಗಿ ಲೋಕಸಭೆಯಲ್ಲಿ ಮತ ಬ್ಯಾಂಕ್ ಭದ್ರಪಡಿಸಿಕೊಳ್ಳಲು ಕೈ ನಾಯಕರಿಂದ ಸಿಎಂ ಬದಲಾವಣೆ ಕೂಗಿನ ತಂತ್ರಗಾರಿಕೆ ನಡೆಯುತ್ತಿರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ಇದಲ್ಲದೆ ಎರಡಂಕಿ ಸ್ಥಾನ ಬರದೆ ಹೋದರೆ ಕಾಂಗ್ರೆಸ್ಗೆ ಹಿನ್ನಡೆ ಎಂಬ ನೆಲೆಯಲ್ಲಿ ನಾಯಕತ್ವ ಬದಲಾವಣೆಯ ಪ್ರಯತ್ನ ನಡೆಯುವ ಸಾಧ್ಯತೆಯು ಇದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


