ಹಣಕಾಸಿನ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹೋಗಿ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ಜಿಲ್ಲೆ ತೇಜೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರು (35) ಆನಂದ್ (30). ಹಣಕಾಸು ವ್ಯವಹಾರದ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು, ಕಳೆದ ರಾತ್ರಿ ಗಂಗೆ ಮೇಲೆ ಆಣೆ ಮಾಡಲು ಕೆರೆ ಬಳಿಗೆ ಹೋಗಿದ್ದಾರೆ. ಈ ವೇಳೆ ಕಾಲು ಜಾರಿ ಬಿದ್ದು ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಶವವನ್ನ ಹೊರೆತೆಗೆಯಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz