ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದ ಅಂಗನವಾಡಿ ಸಹಾಯಕಿ ಆಗಿ ಕೆಲಸ ನಿರ್ವಹಿಸುತ್ತಿದ್ದ ಭಾರತಿ (30) ಎಂಬವರನ್ನು ಅದೇ ಗ್ರಾಮದ ಮೃತಳ ಪತಿಯ ಅಕ್ಕನ ಮಗನಾದ ದಿವಾಕರ್ (25) ಎಂಬುವನು ಅಂಗನವಾಡಿ ಕಟ್ಟಡದ ಹಿಂಭಾಗ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಘಟನೆ ನಡೆದ ಅಂಗನವಾಡಿ ಕಟ್ಟಡದ ಹಿಂಭಾಗದಲ್ಲಿ ವಾಸವಿರುವ ಮನೆಯ ಓರ್ವ ಮಹಿಳೆ ಘಟನೆಯನ್ನು ನೋಡಿದ್ದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಮತ್ತು ಕೆಲ ಸಾರ್ವಜನಿಕರು ಈ ಘಟನೆಯನ್ನು ನೋಡಿದ್ದು, ಕಾಪಾಡಲೆಂದು ಹೋಗುವಾಗ ನಿಮ್ಮನ್ನು ಕೊಲೆ ಮಾಡುತ್ತಾನೆ ಎಂದು ಬೆದರಿಕೆ ಹಾಕಿ, ಓಡಿ ಹೋಗಿರುತ್ತಾನೆ ಎಂದು ಆರೋಪಿಸಲಾಗಿದೆ.
ಈ ಘಟನೆ ನಡೆದ ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಆಗಮಿಸಿದ್ದು, ಘಟನೆ ಸಂಬಂಧ ಮಾಹಿತಿ ಸಂಗ್ರಹಿಸಿದ್ದು, ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700