ಚಿಕ್ಕಬಳ್ಳಾಪುರ: ಅಂಗನವಾಡಿ ಕಾರ್ಯಕರ್ತೆಯೊಬ್ಬರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮೃತ ದುರ್ದೈವಿಯನ್ನು ಎಸ್.ವೆಂಕಟಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಮದುವೆಯಾಗಿದ್ದು, ಹಲವು ವರ್ಷಗಳ ಹಿಂದೆಯೇ ಇವರನ್ನು ಬಿಟ್ಟು ಗಂಡ ಹೋಗಿದ್ದು, ಒಂಟಿಯಾಗಿ ನಾಯನಹಳ್ಳಿ ಗ್ರಾಮದಲ್ಲಿ ವಾಸವಿದ್ದರು. ದುಷ್ಕರ್ಮಿಗಳು ನಿನ್ನೆ ಮನೆಗೆ ನುಗ್ಗಿ ಆಕೆಯನ್ನ ಕೊಂದು ಮನೆಯಲ್ಲಿ ಚಿನ್ನ-ನಗದು ದರೋಡೆ ಮಾಡಿದ್ದಾರೆ ಎನ್ನಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


