ತುಮಕೂರು: ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿ ಇದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ಭರ್ತಿ ಸಂಬಂಧ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಮಾರ್ಚ್ 23ರವರೆಗೆ ಕಾಲಾವಕಾಶ ನೀಡಲಾಗಿದೆ.
ತುರುವೇಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 75 ಸಹಾಯಕಿಯರ ಹುದ್ದೆ, ಶಿರಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 103 ಸಹಾಯಕಿಯರ ಹುದ್ದೆ, ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 68 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಸಾರ್ವಜನಿಕರ ಮಾಹಿತಿಗಾಗಿ ಆಯ್ಕೆ ಪಟ್ಟಿಯನ್ನು ಸಂಬಂಧಪಟ್ಟ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯಿತಿ, ಶಾಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಆಕ್ಷೇಪಣೆಯನ್ನು ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಮಾರ್ಚ್ 23ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತುರುವೇಕೆರೆ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ ದೂ.ವಾ.ಸಂ. 08139–288468, ಶಿರಾ : 08135–200757 ಹಾಗೂ ಕುಣಿಗಲ್: 08132–222691ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


