ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಂದೀಕೆರೆ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಸಮೀಪವಿರುವ ಅಂಗನವಾಡಿಯಲ್ಲಿ ನಾಲ್ಕು ವರ್ಷದ ಬಾಲಕನಿಗೆ ಸಣ್ಣ ವಿಚಾರಕ್ಕಾಗಿ ಸಹಾಯಕಿ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ ಶುಕ್ರವಾರ ನಡೆದಿದೆ.
ಘಟನೆಯ ವಿವರ: ಅಂಗನವಾಡಿಗೆ ತೆರಳಿದ್ದ ಮಗುವಿನ ಕೈಮೇಲೆ ಗಂಭೀರವಾದ ಪೆಟ್ಟಿನ ಗುರುತುಗಳನ್ನು ಕಂಡ ಪೋಷಕರು ಮತ್ತು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗುವಿಗೆ ಕ್ರೂರವಾಗಿ ಶಿಕ್ಷೆ ನೀಡಿರುವ ಸಹಾಯಕಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಅಧಿಕಾರಿಗಳ ಪ್ರತಿಕ್ರಿಯೆ: ಈ ಕುರಿತು ಪ್ರತಿಕ್ರಿಯಿಸಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿ (CDPO) ಹೊನ್ನಪ್ಪ ಅವರು, “ಅಂಗನವಾಡಿ ಸಹಾಯಕಿಗೆ ಅನಾರೋಗ್ಯವಿದ್ದ ಕಾರಣ ಅವರ ಪರವಾಗಿ ಬೇರೊಬ್ಬರು ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮೇಲಧಿಕಾರಿಗಳ ಅನುಮತಿ ಇಲ್ಲದೆ ಬೇರೆಯವರನ್ನು ಕೆಲಸಕ್ಕೆ ನೇಮಿಸಿಕೊಂಡಿರುವುದು ನಿಯಮಬಾಹಿರ. ಈ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಅಲ್ಲದೆ, ಮಗುವಿನ ಚಿಕಿತ್ಸಾ ವೆಚ್ಚವನ್ನು ಸಂಬಂಧಪಟ್ಟ ಅಂಗನವಾಡಿ ಕಾರ್ಯಕರ್ತೆಯೇ ಭರಿಸಬೇಕು ಎಂದು ಅವರು ಸೂಚಿಸಿದ್ದಾರೆ. ಶನಿವಾರ ಕಚೇರಿಯ ಮೇಲ್ವಿಚಾರಕರು ಕಂದೀಕೆರೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


