ಎಚ್.ಡಿ.ಕೋಟೆ: ಅಂಗನವಾಡಿ ಶಿಕ್ಷಕಿ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿರುವ ಘಟನೆ ಗುರುವಾರ ತಾಲ್ಲೂಕಿನ ಎಲೆಹುಂಡಿ ಗ್ರಾಮದ ಅಂಗನವಾಡಿಯಲ್ಲಿ ನಡೆದಿದೆ.
ಅಂಗನವಾಡಿ ಶಿಕ್ಷಕಿ ಸುಶೀಲಾ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಎಚ್.ಡಿ.ಕೋಟೆ ಪಟ್ಟಣದ ಸ್ಟುಡಿಯೋ ಬಸವರಾಜು ಹಲ್ಲೆ ಮಾಡಿದ ವ್ಯಕ್ತಿ ಎನ್ನಲಾಗಿದೆ. ವ್ಯಕ್ತಿಯಿಂದ ಹಲ್ಲೆಗೊಳಗಾದ ಮಹಿಳೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಘಟನೆ:
ಗುರುವಾರ ಅಂಗನವಾಡಿ ಶಿಕ್ಷಕಿ ಸುಶೀಲಾ ಕರ್ತವ್ಯದಲ್ಲಿದ್ದಾಗ ಸ್ಟುಡಿಯೋ ಬಸವರಾಜು ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ಅಂಗನವಾಡಿ ಕೇಂದ್ರದ ಒಳಗೆ ಬಂದು, ನೀನು ನನಗೆ ಯಾಕೆ ಸಹಕಾರ ನೀಡುತ್ತಿಲ್ಲ. ಇಲ್ಲದಿದ್ದರೆ ನಿನ್ನನ್ನು ಕೆಲಸದಿಂದ ತೆಗೆದು ಹಾಕಿಸುತ್ತೇನೆ ಎಂದು ಬೆದರಿಕೆಯೊಡ್ಡಿ ನನ್ನ ಕೈಹಿಡಿದು ಎಳೆದಾಡಿ, ಹಿಂದಿನಿಂದ ನನ್ನನ್ನು ತಬ್ಬಿಕೊಂಡರು ನಾನು ಪ್ರತಿರೋಧ ಒಡ್ಡಿದಾಗ ನನ್ನ ತಲೆ ಕೂದಲು ಹಿಡಿದು ಎಳೆದಾಡಿ ನನ್ನ ಕೆನ್ನೆಗೆ ಬಲವಾಗಿ ಹೊಡೆದು ಪ್ರಜ್ಞೆ ತಪ್ಪುವಂತೆ ಮಾಡಿ ಕೆಳಕ್ಕೆ ಬೀಳಿಸದರು, ಅಷ್ಟರಲ್ಲಿ ರಸ್ತೆಯಲ್ಲಿ ಯಾವುದೋ ಕಾರು ಬಂದ ಶಬ್ದ ಕೇಳಿ ನನ್ನನ್ನು ಬಿಟ್ಟು ಬಸವರಾಜು ಹೊರಗೆ ಬಂದರು, ಕೆಳಗೆ ಬಿದ್ದಿದ್ದ ನನ್ನನ್ನು ಕಾರಿನಲ್ಲಿ ಇದ್ದ ಮಹಿಳೆ ಹಾಗೂ ಇತರರು ನನ್ನನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದರು ಎಂದು ಪೊಲೀಸರಿಗೆ ದೂರು ನೀಡಿದ್ದು, ದೂರು ಪಡೆದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ದೀಪಾ ಆಸ್ಪತ್ರೆಗೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದು ಅಂಗನವಾಡಿ ಶಿಕ್ಷಕಿಯ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.
ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿಗೆ ಬಂದು ಸ್ಟುಡಿಯೋ ಬಸವರಾಜು ತೊಂದರೆ ನೀಡುತ್ತಿದ್ದು, ಈ ವಿಚಾರವನ್ನು ನಮ್ಮ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರು ಕೂಡ ಬಸವರಾಜುಗೆ ಹೆದರಿಕೊಂಡು ನನಗೆ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ನೊಂದ ಅಂಗನವಾಡಿ ಶಿಕ್ಷಕಿ ಸುಶೀಲ ಅಳಲು ತೋಡಿಕೊಂಡಿದ್ದಾರೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4