ನವದೆಹಲಿ: ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚವ್ಹಾಣ್ ಅವರನ್ನು ನೂತನ ಸಿಡಿಎಸ್ ಆಗಿ ನೇಮಕ ಮಾಡಲಾಗಿದೆ.
ಎರಡನೇ ಸಿಡಿಎಸ್ ಅನಿಲ್ ಚವ್ಹಾಣ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಹೆಲಿಕಾಪ್ಟರ್ ದುರಂತದಲ್ಲಿ ಬಿಪಿನ್ ರಾವತ್ ಆಕಾಲಿಕ ನಿಧನದಿಂದ ತೆರವಾಗಿದ್ದ ಹುದ್ದೆಗೆ 2021 ರ ಮೇ 31 ರಂದು ಸೇನೆಯಿಂದ ನಿವೃತ್ತರಾಗಿದ್ದ ಚವ್ಹಾಣ್ ಅವರನ್ನು ನೇಮಕ ಮಾಡಲಾಗಿದೆ.
ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರನ್ನಾಗಿ ಸರ್ಕಾರ ನೇಮಿಸಿದೆ. ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮತ್ತು ಮುಂದಿನ ಆದೇಶದವರೆಗೆ ಮಿಲಿಟರಿ ವ್ಯವಹಾರಗಳ ಇಲಾಖೆ ಭಾರತ ಸರ್ಕಾರದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಾರೆ.
ಸುಮಾರು 40 ವರ್ಷಗಳ ವೃತ್ತಿಜೀವನದಲ್ಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಹಲವಾರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy