ತುಮಕೂರು: ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಹಾಗೂ ಸೇವೆ ವಿಲೀನಗೊಳಿಸುವ ಸಲುವಾಗಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಶಾಸಕ ಡಿ.ಸಿ. ಗೌರಿಶಂಕರ್ ಭಾಗಿಯಾದರು.
ಈ ವೇಳೆ ಮಾತನಾಡಿದ ಶಾಸಕರು, ದೇಶದಲ್ಲಿ ಮನುಷ್ಯನಿಗೆ ಗಾಳಿ, ನೀರು, ಆಹಾರ ಎಷ್ಟು ಮುಖ್ಯವೋ ಅಷ್ಟೇ ಮುಖ್ಯವಾದ ವಿಷಯ ಎಂದರೆ ಅದುವೇ ಶಿಕ್ಷಣ. ಅಂತಹ ಶಿಕ್ಷಣ ವ್ಯವಸ್ಥೆಯನ್ನು ನಾಶ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಿಕ್ಷಕರನ್ನು ಬೀದಿಗೆ ಬರುವಂತೆ ಮಾಡಿದ ಸರ್ಕಾರಕ್ಕೆ ನಾಚಿಕೆಯಾಗಬೇಕು . ಶಿಕ್ಷಣ ಶಿಕ್ಷಣ ಎಂದು ಅಬ್ಬರಿಸುವ ಸರ್ಕಾರ ಶಿಕ್ಷಕರನ್ನೆ ಕಡೆಗಣಿಸಿ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಶಾಸಕ ಡಿ.ಸಿ.ಗೌರಿಶಂಕರ್ ವಾಗ್ದಾಳಿ ನಡೆಸಿದರು.
ಅತಿಥಿ ಉಪನ್ಯಾಸಕರ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹಕ್ಕೆ ಜೆಡಿಎಸ್ ಪಕ್ಷದ ವತಿಯಿಂದ ನಿರಂತರವಾಗಿ ನಮ್ಮ ಬೆಂಬಲವಿದೆ. ಸರ್ಕಾರ ಕೂಡಲೇ ಅತಿಥಿ ಉಪನ್ಯಾಸಕರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮುಂದಾಗಬೇಕಿದೆ ಎಂದು ಅವರು ಇದೇ ವೇಳೆ ಸರ್ಕಾರವನ್ನು ಒತ್ತಾಯಿಸಿದರು.
ಪ್ರಾದೇಶಿಕ ಪಕ್ಷಕ್ಕೆ ಜನರ ಸಂಕಷ್ಟಗಳನ್ನು ಅರ್ಥೈಸಿಕೊಳ್ಳುವ ಮನೋಭಾವವಿದೆಯೇ ಹೊರತು ರಾಷ್ಟ್ರೀಯ ಪಕ್ಷಗಳಿಗೆ ಜನರ ಸಮಸ್ಯೆಗಳ ಬಗ್ಗೆ ಚಿಂತನೆ ಇಲ್ಲಾ. ರಾಷ್ಟ್ರೀಯ ಪಕ್ಷಗಳ ನಾಯಕರು ಅಧಿಕಾರಕ್ಕಾಗಿ ಸಾರ್ವಜನಿಕ ಸಭೆಗಳಲ್ಲಿ ತಮ್ಮ ತೋಳ್ಬಲ ತೋರುವ ಬದಲು ಇಂತಹ ಸಮಸ್ಯೆಗಳ ಬಗ್ಗೆ ಚಿಂತನೆ ಮಾಡುವುದು ಉತ್ತಮ ಎಂದು ನೇರವಾಗಿ ಕುಟುಕಿದರು.
“ಸಚಿವ ಮಾಧುಸ್ವಾಮಿಗೆ ಧನ್ಯವಾದ”
ಪ್ರತಿಭಟನೆಯ ಬಳಿಕ ಮಾಧ್ಯಮಗಳೂಂದಿಗೆ ಮಾತನಾಡಿದ ಅವರು, ತುಮಕೂರು ಗ್ರಾಮಾಂತರದ ಕೆರೆಗಳಿಗೆ ನೀರು ಹರಿಸಲು ನಮ್ಮ ಮನವಿಗೆ ಸ್ಪಂದಿಸಿದ ನಮ್ಮ ಜಿಲ್ಲೆಯ ಉತ್ಸುವಾರಿ ಸಚಿವರಾದ ಮಾಧುಸ್ವಾಮಿ ಯವರಿಗೆ ತುಮಕೂರು ಗ್ರಾಮಾಂತರ ಕ್ಷೇತ್ರದ ರೈತರ ಪರವಾಗಿ ಅಭಿನಂದಿಸುತ್ತೇನೆ ಎಂದರು.
ಮಾಧುಸ್ವಾಮಿಯವರು ಹಿರಿಯ ಹಾಗೂ ಅನುಭವಿ ರಾಜಕಾರಣಿ ಅವರ ಮಾತು ಕಠೋರವಾದರು ಮನಸ್ಸು ಬೆಣ್ಣೆಯಂತದ್ದು ತುಮಕೂರು ಜಿಲ್ಲೆಗೆ ನೀರು ಹರಿಸುವಲ್ಲಿ ಅವರ ಶ್ರಮ ಮಹತ್ವವಾದದ್ದು ಆಗಾಗಿ ಅವರಿಗೆ ನಮ್ಮ ಕ್ಷೇತ್ರದ ಜನತೆ ಪರವಾಗಿ ಅಭಿನಂದಿಸುತ್ತೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy