ಬೆಳಗಾವಿ : ಡಾ. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಾರ್ಯಕರ್ತರು ,ಬೆಂಬಲರೊಂದಿಗೆ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡರು. ಕ್ಷೇತ್ರದ ಜನರು ಶುಭ ಹಾರೈಸಿದರು.
ಖಾನಾಪುರ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ಜನಮಂದಿ ದಿನದ ನಿಮಿತ್ತ ಡಾ. ಅಂಜಲಿತಾಯಿ ನಿಂಬಾಳ್ಕರ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸನೆ ಶಿಬಿರ, ಮತ್ತು ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಅಲ್ಲದೇ ಸ್ವತಹ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ರಕ್ತದಾನ ಮಾಡಿ ರಕ್ತದಾನಕ್ಕೆ ಚಾಲನೆ ನೀಡಿದರು .
ಈ ಸಂದರ್ಭದಲ್ಲಿ ಬೇರೆ ಬೇರೆ ಗ್ರಾಮಗಳಿಂದ ಬಂದ ನೂರಾರು ಜನರಿಗೆ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಲಾಯಿತು. ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿದರು.
ಈ ಸಂದರ್ಭದಲ್ಲಿ ಹೇಮಂತ ನಿಂಬಾಳ್ಕರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯನವಲಗಟ್ಟಿ, ಬಿಜೆಪಿ ಮುಖಂಡ ಬಾಬುರಾವ್ ದೇಸಾಯಿ, ಮಾಜಿ ಶಾಸಕರಾದ ದಿಗಂಬರ್ ಪಾಟೀಲ್, ಶಾಸಕ ಆಪ್ತರ ಸಹಾಯಕ ಪ್ರಸನ್ನಕುಮಾರ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಹಾಂತೇಶ್ ರಾಹುತ್, ಮಹಾಂತೇಶ್ ಕಲ್ಯಾಣಿ, ಕುಟುಂಬದ ಸದಸ್ಯರ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಕ್ಷೇತ್ರದ ಜನರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


