ಅಂಜೂರ ಹಣ್ಣಿನಲ್ಲಿ ಕ್ಯಾಲ್ಸಿಯಂ & ಪೊಟ್ಯಾಷಿಯಂ ಪ್ರಮಾಣ ಹೆಚ್ಚಿದ್ದು, ಇದು ಮೂಳೆಗಳ ಸಾಂದ್ರತೆಯನ್ನು ಹೆಚ್ಚಿಸುತ್ತದೆ.
* ಇದು ಆಂಟಿಆಕ್ಸಿಡೆಂಟ್ ಪ್ರಭಾವದಿಂದ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ.
* ಅಂಜೂರದಲ್ಲಿ ಪೊಟ್ಯಾಶಿಯಂ ಮತ್ತು ಸೋಡಿಯಂ ಇರುವುದರಿಂದ ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಡುತ್ತದೆ.
* ಕೆಟ್ಟ ಕೊಲೆಸ್ಟ್ರಾಲ್ ಅನ್ನು ದೂರ ಮಾಡುತ್ತದೆ. ಮಲಬದ್ಧತೆ ಸಮಸ್ಯೆಯನ್ನೂ ಹೋಗಲಾಡಿಸುತ್ತದೆ.
ಆಯುರ್ವೇದದಲ್ಲಿ ವಿಶೇಷ ಸ್ಥಾನವನ್ನು ಹೊಂದಿರುವ ಅಂಜೂರದಲ್ಲಿ ಪೊಟ್ಯಾಸಿಯಮ್, ಖನಿಜ ಮತ್ತು ಜೀವಸತ್ವಗಳು ತುಂಬಿವೆ. ಇದು ನಿಮ್ಮ ಆರೋಗ್ಯಕ್ಕೆ ಮಾತ್ರವಲ್ಲ, ನಿಮ್ಮ ಚರ್ಮಕ್ಕೂ ತುಂಬಾ ಪ್ರಯೋಜನಕಾರಿ. ಕೆಂಪು ಅಂಜೂರದ ಹಾಲನ್ನು ಸೇವಿಸುವುದರಿಂದ ಮಧುಮೇಹಕ್ಕೆ ಪರಿಹಾರ ಸಿಗುತ್ತದೆ. ಹಾಗಿದ್ರೆ ಅಂಜೂರದ ಹಣ್ಣಿನ ಇತರೆ ಆರೋಗ್ಯಕರ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.
ಮೂಳೆಗಳನ್ನು ಬಲಪಡಿಸುತ್ತದೆ: ಅಂಜೂರ ಅನೇಕ ರೀತಿಯಲ್ಲಿ ದೇಹಕ್ಕೆ ಪ್ರಯೋಜನಕಾರಿ. ಇದರಲ್ಲಿ ಸಾಕಷ್ಟು ಕ್ಯಾಲ್ಸಿಯಂ ಅಂಶ ಇರುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ. ಹಾಗೆಯೇ ಸ್ನಾಯು ದೌರ್ಬಲ್ಯವನ್ನು ದೂರ ಮಾಡುತ್ತದೆ.
ಮೊಡವೆಗೆ ಮನೆಮದ್ದು: ಮೊಡವೆ ಸಮಸ್ಯೆಗಳಿಂದ ಬಳಲುತ್ತಿರುವವರು ಅಂಜೂರದ ಮೂಲಕ ಪರಿಹಾರ ಕಂಡುಕೊಳ್ಳಬಹುದು. ಇದಕ್ಕಾಗಿ, ಒಣಗಿದ ಅಂಜೂರವನ್ನು ಪುಡಿ ಮಾಡಿ ಪೇಸ್ಟ್ ಮಾಡಿ ಮುಖಕ್ಕೆ ಹಚ್ಚಿ. ಇದನ್ನು 15 ರಿಂದ 20 ನಿಮಿಷಗಳ ಕಾಲ ಮುಖದ ಮೇಲೆ ಬಿಡಿ, ನಂತರ ನೀರಿನಿಂದ ತೊಳೆಯಿರಿ.
ಮೂತ್ರ ವಿಜರ್ಸನೆ ಸಮಸ್ಯೆ: ಮೂತ್ರ ವಿಸರ್ಜನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತೆಗೆದುಹಾಕುವಲ್ಲಿ ಇದು ಪ್ರಯೋಜನಕಾರಿಯಾಗಿದೆ. ಈ ಕಾರಣದಿಂದಾಗಿ ಇದು ದೇಹದ ವಿಷವನ್ನು ಹೊರಹಾಕುತ್ತದೆ.
ಮಲಬದ್ಧತೆ ಸಮಸ್ಯೆ: ನಿಯಮಿತವಾಗಿ ಜೇನುತುಪ್ಪದೊಂದಿಗೆ ಎರಡು ಮೂರು ಅಂಜೂರದ ಹಣ್ಣುಗಳನ್ನು ಸೇವಿಸಿ. ಇದು ಮಲಬದ್ಧತೆ ಮತ್ತು ಗ್ಯಾಸ್ ಸಮಸ್ಯೆಯನ್ನು ತೊಡೆದುಹಾಕುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯು ಸಹ ಬಲವಾಗಿರುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy