ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಜೂನ್ 20 ರಂದು ಅಂದರೆ ನಾಳೆ ಬೆಂಗಳೂರು ಸೇರಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೂಚನೆ
ನೀಡಿದ್ದಾರೆ. ಕಾಂಗ್ರೆಸ್ ಜಿಲ್ಲಾ ಘಟಕಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮುಂದಿನ ಹಂತದಲ್ಲಿ ಬ್ಲಾಕ್ ಮಟ್ಟದಲ್ಲಿಯೂ ಪ್ರತಿಭಟನೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲು ಕ್ರಮ ಕೈಗೊಳ್ಳಲಾಗಿದೆ. ಆದರೆ ಅನ್ನಭಾಗ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಕೇಂದ್ರ ನಿರಾಕರಿಸಿದೆ. ಹೀಗಾಗಿ ರಾಜ್ಯಾದ್ಯಂತ ನಾಳೆ ಕಾಂಗ್ರೆಸ್ ಪ್ರತಿಭಟನೆ ಹಮ್ಮಿಕೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


