ಬೆಂಗಳೂರು: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದವನೇ ಹೆಣವಾದ ಘಟನೆ ಇಲ್ಲಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಶಾರದನಗರದಲ್ಲಿ ನಡೆದಿದೆ. ಗಣೇಶ್ ನಾಯ್ಕ ಕೊಲೆಯಾದವ.
ಸ್ಥಳಕ್ಕೆ ಸುಬ್ರಮಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.


