ಚೆನ್ನೈ: ಲೋಕಸಭಾ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಒಂದು ಸ್ಥಾನವನ್ನೂ ಗೆಲ್ಲಲು ಬಿಜೆಪಿ ವಿಫಲವಾದ ಬೆನ್ನಲ್ಲೇ ಒಂದು ತಿಂಗಳ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದರ ಬೆನ್ನಲ್ಲೇ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರಿಗೆ ಲಂಡನ್ ನಲ್ಲಿ ಫೆಲೋಶಿಪ್ ದೊರೆತಿದ್ದು, ಅವರು ಸದ್ಯದಲ್ಲೇ ಬ್ರಿಟನ್ ಗೆ ತೆರಳಲಿದ್ದಾರೆ.
ಚೆವೆನಿಂಗ್ ಗುರುಕುಲ್ ಫೆಲೋಶಿಪ್ ಫಾರ್ ಲೀಡರ್ ಶಿಪ್ ಆ್ಯಂಡ್ ಎಕ್ಸಲೆನ್ಸ್’ ಕಾರ್ಯಕ್ರಮಕ್ಕೆ ಅವರು ಆಯ್ಕೆಯಾಗಿದ್ದು, ಮೂರು ತಿಂಗಳು ಲಂಡನ್ ನಲ್ಲೇ ನೆಲೆಸಲಿದ್ದಾರೆ. ಈ ಕುರಿತು ಬಿಜೆಪಿ ಹೈಕಮಾಂಡ್ ಜತೆಯೂ ಚರ್ಚಿಸಿದ್ದಾರೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA