ಬೆಳಗಾವಿ: ಕುಡಿದ ಮತ್ತಿನಲ್ಲಿ ತಮ್ಮ ತನ್ನ ಅಣ್ಣನನ್ನೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಗೋಕಾಕ್ ತಾಲೂಕಿನ ವಾಲ್ಮೀಕಿ ನಗರದಲ್ಲಿ ನಡೆದಿದೆ. ಚೇತನ ರಮೇಶ್ ಪರಮಾರ್ (25) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ.
ಚೇತನ ದೊಡ್ಡಪ್ಪನ ಮಗ ತಿಲಕ ಪರಮಾರ್ (19) ಎಂಬಾತನೇ ಕೊಲೆಗಾರ. ಚೇತನ ಪರಮಾರ್ ಮತ್ತು ತಿಲಕ ಪರಮಾರ್ ವಾಲ್ಮೀಕಿ ನಗರದ ಒಂದೇ ಮನೆಯಲ್ಲಿ ವಾಸವಿದ್ದರು.
ಆದರೆ, ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಇಬ್ಬರ ಮಧ್ಯೆ ವಾಗ್ವಾದ ಶುರುವಾಗಿ, ಅದು ವಿಕೋಪಕ್ಕೆ ಹೋಗಿ ಕೊಲೆಯಲ್ಲಿ ಅಂತ್ಯವಾಗಿದೆ. ಗೋಕಾಕ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


