ಪಕ್ಕದ ಮನೆ ದಂಪತಿಯ ಸರಸ ಸಲ್ಲಾಪದಿಂದ ನಮಗೆ ಕಿರಿಕಿರಿಯಾಗುತ್ತದೆ ಎಂದು ಮಹಿಳೆಯೋರ್ವರು ದೂರು ದಾಖಲಿಸಿರುವ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
44 ವರ್ಷದ ಮಹಿಳೆಯೊಬ್ಬರು ಆವಲಹಳ್ಳಿ, ಬಿಡಿಎ ಲೇಔಟ್ ನಲ್ಲಿ ವಾಸವಾಗಿದ್ದು, ಈಕೆಯ ಮನೆಯ ಬಾಗಿಲಿಗೆ ಪಕ್ಕದ ಮನೆಯ ಬೆಡ್ ರೂಂ ಇರುವ ಕಾರಣ ಪಕ್ಕದ ಮನೆಯಲ್ಲಿ ವಾಸವಾಗಿರುವ ದಂಪತಿ ಬೆಡ್ ರೂಂ ಕಿಟಕಿ ತೆರೆದು ಸರಸ ಸಲ್ಲಾಪದಲ್ಲಿ ತೊಡಗುವುದು, ಹಾಗೂ ವಿಕೃತ ಮತ್ತು ಅಸಹ್ಯ ಮನಸ್ಥಿತಿಯಿಂದ ನಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಪಕ್ಕದ ಮನೆಯರಲ್ಲಿ ದೂರು ನೀಡಿದ ಮಹಿಳೆ, ದಯವಿಟ್ಟು ಬೆಡ್ ರೂಂ ಕಿಟಕಿ ಹಾಕಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಪಕ್ಕದ ಮನೆಯ ವ್ಯಕ್ತಿ ಅವಾಚ್ಯ ಶಬ್ದಗಳಿಂದ ಮಹಿಳೆ ಹಾಗೂ ಕುಟುಂಬದವರಿಗೆ ನಿಂದನೆ ಮಾಡಿದ್ದಾನೆ. ಅಷ್ಟು ಮಾತ್ರವಲ್ಲದೇ ಮಹಿಳೆಯ ಮೇಲೆ ಅತ್ಯಾಚಾರ, ಕೊಲೆ ಮಾಡುವುದಾಗಿ ಬೆದರಿಕೆ ಕೂಡಾ ಹಾಕಿದ್ದಾನೆ. ಅಲ್ಲದೆ ಹಲ್ಲೆಗೆ ಕೂಡಾ ಯತ್ನ ಮಾಡಿದ್ದಾನೆ.
ಇಷ್ಟು ಸಾಲದು ಎಂದು ಕೆಲವು ಯುವಕರನ್ನು ಕರೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಹಿಳೆ ಮತ್ತು ಮಹಿಳೆಯ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾರೆ. ಇವರಿಂದ ರಕ್ಷಣೆ ಕೊಡಿ ಹಾಗೂ ಇವರುಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಹಲವು ಐಪಿಸಿ ಸೆಕ್ಷನ್ ಅಡಿಯಲ್ಲಿ ಕೇಸು ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


