ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋದಿಂದ ಇಳಿಯುವಾಗ ಓರ್ವ ಪ್ರಯಾಣಿಕ ಆಯತಪ್ಪಿ ಬಿದ್ದಿದ್ದು, ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ಇಂದು ಮಧ್ಯಾಹ್ನ 1.13ರ ಸುಮಾರಿಗೆ ಹಸಿರು ಮಾರ್ಗದಲ್ಲಿ ನಡೆದಿದೆ.
ಮೆಟ್ರೋದಿಂದ ಇಳಿಯುವಾಗ ಆಯತಪ್ಪಿ ರೈಲು ಹಳಿಗೆ ಬಿದ್ದ ವ್ಯಕ್ತಿ ಅದೃಷ್ಟವಶಾತ್ ಬಚಾವ್ ಆಗಿರುವಂತಹ ಘಟನೆ ಮಧ್ಯಾಹ್ನ 1.13ರ ಸುಮಾರಿಗೆ ನಗರದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ನಡೆದಿದೆ. ಭದ್ರತಾ ಸಿಬ್ಬಂದಿ ತಕ್ಷಣ ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದರಿಂದ ಪ್ರಯಾಣಿಕ ಬಚಾವ್ ಆಗಿದ್ದಾರೆ. ಘಟನೆಯಿಂದಾಗಿ ಸುಮಾರು 15 ನಿಮಿಷಗಳ ಕಾಲ ಮೆಟ್ರೋ ಸೇವೆ ಸ್ಥಗಿತವಾಗಿತ್ತು.
ಈ ವೇಳೆ ತಕ್ಷಣ ಭದ್ರತಾ ಸಿಬ್ಬಂದಿಗಳು ಎಮರ್ಜೆನ್ಸಿ ಬಟನ್ ಉಪಯೋಗಿಸಿದ್ದಾರೆ. ಪವರ್ ಸಪ್ಲೈ ಆಫ್ ಮಾಡಿದ್ದರಿಂದ ಮೆಟ್ರೋ ಪ್ರಯಾಣಿಕರು ಬಚಾವಾಗಿದ್ದಾರೆ. ಈ ವೇಳೆ ಹಳಿಗೆ ಬಿದ್ದರೂ ಯಾವುದೇ ತೊಂದರೆ ಇಲ್ಲದೆ ಪ್ರಯಾಣಿಕ ಪಾರಾಗಿದ್ದಾನೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


