ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಈಗಾಗಲೇ ಮೃತಪಟ್ಟಿದ್ದಾರೆ. ಇದೀಗ ಮತ್ತೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಈ ಘಟನೆಯಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಬೆಂಕಿ ಅವಘಡದಲ್ಲಿ ಗಾಯಗೊಂಡಿರುವ ಇನ್ನೂ ಆರು ಅಯ್ಯಪ್ಪ ಭಕ್ತರು ಸದ್ಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (ಕಿಮ್ಸ್) ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೃಹ ಸಚಿವ ಜಿ. ಪರಮೇಶ್ವರ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳಿಗೆ ತಜ್ಞ ವೈದ್ಯರ ತಂಡದಿಂದ ಕಾಳಜಿ ವಹಿಸಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಮನವಿ ಮಾಡಲಾಗುವುದು ಎಂದು ಎಕ್ಸ್ ಪೋಸ್ಟ್ನಲ್ಲಿ ಪರಮೇಶ್ವರ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


