ಮಂಡ್ಯ: ಮೇಲುಕೋಟೆ ಶಿಕ್ಷಕಿ ‘ದೀಪಿಕಾ’ ಹತ್ಯೆ ಬೆನ್ನಲ್ಲೇ ಮಂಡ್ಯದಲ್ಲಿ ಮತ್ತೊಂದು ಭೀಕರ ಕೃತ್ಯ ನಡೆದಿದ್ದು, ಮಂಡ್ಯದ ಕಲ್ಲಹಳ್ಳಿ ಸಮೀಪದ ರೈಲ್ವೇ ಗೇಟ್ ಬಳಿಯ ಮೋರಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಘಟನೆ ನಡೆದ ಸ್ಥಳಕ್ಕೆ ಮಂಡ್ಯದ ಸೆಂಟ್ರಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೇವಲ 2 ದಿನದ ಅಂತರದಲ್ಲಿ ಇಬ್ಬರು ಮಹಿಳೆಯರ ಕೊಲೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ.


