ತುಮಕೂರು: ಮತ್ತೊಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜ್ಯದ ಅಭಿವೃದ್ದಿ ಆಗಲಿದೆ. ಉತ್ತಮವಾದ ವಿಮಾನ ನಿಲ್ದಾಣ ಜಾರಿಗೆ ಬರಲು , 150 ಕಿ.ಮೀ. ದೂರ ಇರಬೇಕು. ಶಿರಾ ಉತ್ತಮವಾಗಿದೆ, ಪಕ್ಕದ ಆಂಧ್ರಪ್ರದೇಶ ಹಾಗೂ ಕರ್ನಾಟಕಕ್ಕೂ ಅನುಕೂಲವಾಗಲಿದೆ ಎಂದು ರಾಜ್ಯದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೆಂಪೇಗೌಡ ವಿಮಾನ ನಿಲ್ದಾಣ ಅಸ್ತಿತ್ವಕ್ಕೆ ಬಂದ ವೇಳೆ ನಾನು ಕೂಡ ಅಂದು ಸರಕಾರದ ಪ್ರತಿನಿಧಿಯಾಗಿ ಕೆಲಸ ಮಾಡಿದ್ದೆ ಎಂದರು.
ಶಂಕಿತ ಆತಂಕವಾದಿ ತಹವೂರ್ ರಾಣ ನನ್ನು ಈಗಾಗಲೇ ಎನ್ ಐ ಎ ಬಂಧಿಸಿ ಭಾರತಕ್ಕೆ ಕರೆದುಕೊಂಡು ಬಂದಿದೆ ಇನ್ನು ಮುಂದಿನ ದಿನಗಳಲ್ಲಿ ನ್ಯಾಯಾಲಯ ತೆಗೆದುಕೊಳ್ಳುವಂತಹ ತೀರ್ಮಾನವನ್ನು ಸ್ವಾಗತಿಸುತ್ತೇನೆ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಈಗಾಗಲೇ ಅಮೆರಿಕದಿಂದ ರಾಣಾನನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ ಎನ್ಐಎ ವಶಕ್ಕೆ ತೆಗೆದುಕೊಂಡು ವಿಚಾರಣೆ ಆರಂಭಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW