ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆಗೆ ಸಂಬಂಧಿಸಿದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಲ್ಲಿ ಕೆಲಸ ಮಾಡುತ್ತಿದ್ದ ಮತ್ತೋರ್ವ ಪ್ರಮುಖ ಶೂಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ನಿವಾಸಿ ಸುಜಿತ್ ಸುಶೀಲ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ ಗ್ಯಾಂಗ್ ನ ಏಳು ‘ಶೂಟರ್’ಗಳನ್ನು ಕಳೆದ 48 ಗಂಟೆಗಳಲ್ಲಿ ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ದೆಹಲಿಯಾದ್ಯಂತ ಬಂಧಿಸಲಾಗಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ಆರು ಅರೆ–ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಾಬಾ ಸಿದ್ದಿಕಿ ಅವರ ಹತ್ಯೆ ಮತ್ತು ಬಿಷ್ಣೋಯ್ ಗ್ಯಾಂಗ್ ನ ಇತರ ಕಾರ್ಯಾಚರಣೆಗಳ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q