ಬೆಳಗಾವಿ: ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವು ಸಂಭವಿಸಿದೆ. ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತಪಟ್ಟವರಾಗಿದ್ದಾರೆ.
ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ಗಂಗವ್ವ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ ಗೊಡಕುಂದ್ರಿ ಅವರಿಗೆ ಬಿಪಿ ಲೋ ಆಗಿ ಸೀರಿಯಸ್ ಇದೆ ಎಂದು ವೈದ್ಯರು ಜ.31ರಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ.
ಬಿಮ್ಸ್ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸಿರಿಯಸ್ ಇದ್ದಾಗ ವೈದ್ಯರು ಸರಿಯಾಗಿ ಚಿಕಿತ್ಸೆ ಕೊಟ್ಟಿದ್ದರೇ ಅಕ್ಕ ಉಳಿಯುತ್ತಿದ್ದಳು. ನನ್ನ ಅಕ್ಕನ ಸಾವಿಗೆ ವೈದ್ಯರು ಕಾರಣ ಎಂದು ಗಂಗವ್ವ ಸಹೋದರ ಶಂಕರಪ್ಪ ಆರೋಪಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4