ವಾರದ ಹಿಂದೆ ಕರ್ನಾಟಕ ಹೈಕೋರ್ಟ್ ವಿಡಿಯೋ ಕಾನ್ಸರೆನ್ಸ್ ಕಲಾಪದ ವೇಳೆ ಅಶ್ಲೀಲ ಚಿತ್ರ ಪ್ರದರ್ಶನ ಮಾಡಿದ ಘಟನೆ ನಡೆದಿತ್ತು. ಇದೀಗ ಮತ್ತೊಮ್ಮೆ ಇದೇ ರೀತಿಯ ಘಟನೆ ಮರುಕಳಿಸಿದೆ. ಹೈಕೋರ್ಟ್ ಬಳಿಕ ಮತ್ತೊಂದು ಕೋರ್ಟ್ ಕಲಾಪದ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ.
ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಾಧೀಕರಣದ (ಕೆಎಸ್‌ಎಟಿ) ವಿಡಿಯೋ ಕಾನ್ಸರೆನ್ಸ್ ವೇಳೆ ಅಶ್ಲೀಲ ವಿಡಿಯೋ ಪ್ರದರ್ಶನ ಮಾಡಲಾಗಿದೆ. ಘಟನೆ ಬಗ್ಗೆ ಬೆಂಗಳೂರಿನ ಸೆಂಟ್ರಲ್ ಸೆನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ.


