ರಾಮನಗರ: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪ ಎದುರಿಸಿ ನ್ಯಾಯಾಂಗ ಬಂಧನದಲ್ಲಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ರಾಮನಗರ ಠಾಣೆಗೆ ಮಹಿಳೆಯೊಬ್ಬರು ಆಗಮಿಸಿ ಮುನಿರತ್ನ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದ್ದು, ಬೆಂಗಳೂರು ಮೂಲದ ಮಹಿಳೆ ರಾಮನಗರ ಪೊಲೀಸ್ ಠಾಣೆಗೆ ಆಗಮಿಸಿದ್ದು, ದೂರು ನೀಡಲು ತಯಾರಿ ನಡೆಯುತ್ತಿದೆ ಎಂದು ವರದಿಯಾಗಿದೆ.
ಮುನಿರತ್ನ ನಾಯ್ಡು ತನ್ನ ಜೊತೆಗೆ ಅನುಚಿತವಾಗಿ ವರ್ತಿಸಿರುವುದಾಗಿ ಮಹಿಳೆ ದೂರಿದ್ದಾರೆನ್ನಲಾಗಿದೆ. ಡಿವೈಎಸ್ಪಿ ಕಚೇರಿಯಲ್ಲಿ ಮಹಿಳೆಯ ಜೊತೆ ಪೊಲೀಸರು ಸದ್ಯ ಮಾತುಕತೆ ನಡೆಸುತ್ತಿದ್ದಾರೆ. ಕಗ್ಗಲೀಪುರ ಪೊಲೀಸ್ ಠಾಣೆಗೆ ರಾಮನಗರ ಪೊಲೀಸರು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q