ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ. ವಲಸೆ ಕಾರ್ಮಿಕನೊಬ್ಬ ಉಗ್ರರ ಗುಂಡಿಗೆ ಬಲಿಯಾಗಿದ್ದಾನೆ. ಯುಪಿ ಮೂಲದ ಮುಖೇಶ್ ಮೃತರು. ಪುಲ್ವಾಮಾದ ತುಮ್ಚಿ ನೌಪೋರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಪುಲ್ವಾಮಾದಲ್ಲಿ ನಡೆದ ಎರಡನೇ ಉಗ್ರರ ದಾಳಿ ಇದಾಗಿದೆ. ಭಾನುವಾರ ಈದ್ಗಾ ಪ್ರದೇಶದಲ್ಲಿ ಕ್ರಿಕೆಟ್ ಆಡುತ್ತಿದ್ದ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಉಗ್ರರ ಗುಂಡಿಗೆ ಬಲಿಯಾಗಿದ್ದರು. ದಾಳಿಯ ನಂತರ, ಭದ್ರತಾ ಪಡೆಗಳು ಪುಲ್ವಾಮಾ ಮತ್ತು ಜಮ್ಮು ಮತ್ತು ಕಾಶ್ಮೀರದ ಇತರ ಭಾಗಗಳಲ್ಲಿ ಕಣ್ಗಾವಲು ಹೆಚ್ಚಿಸಿವೆ.


