ಹೆಚ್.ಡಿ.ಕೋಟೆ: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದೆ.
ತಾಲೂಕಿನ ಕಣಿಯನಹುಂಡಿ ಗ್ರಾಮದ ಜಯರಾಮು (55)ಎಂಬ ರೈತ ಪ್ರಾಣ ಕಳೆದುಕೊಂಡ ದುರ್ದೈವಿಯಾಗಿದ್ದಾರೆ. ಜಯರಾಮು ಎರಡು ಎಕರೆ ಜಮೀನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಬೆಳೆದ ಇಬ್ಬರು ಹೆಣ್ಣುಮಕ್ಕಳನ್ನು ಮದುವೆ ಮಾಡಬೇಕೆಂದು ಜನಬ್ಯಾಂಕ್, ಇಕ್ವೀಟಸ್ ಪೈನಾನ್ಸ್ ನಲ್ಲಿ 5 ಲಕ್ಷ ಸಾಲ ಪಡೆದು ಕೊಂಡಿದ್ದರು. ಸಾಲದ ಹಣದಲ್ಲಿ ಮಕ್ಕಳ ಮದುವೆ ಹಾಗೂ ಕೃಷಿ ಚಟುವಟಿಕೆಯನ್ನು ನಡೆಸಿದ್ದರು. ಆದರೆ ಬೆಳೆದ ಬೆಳೆಗೆ ಸರಿಯಾದ ರೀತಿಯ ಬೆಲೆ ಸಿಗದ ಕಾರಣ ಜಯರಾಮು ದಾರಿತೋಚದೆ ಕಂಗಲಾಗಿದ್ದರು.
ಇತ್ತ ಸಾಲ ತೀರಿಸುವಂತೆ ಪೈನಾನ್ಸ್ ಕಂಪನಿಯ ಸಿಬ್ಬಂದಿಗಳು ಕಿರುಕುಳ ನೀಡಲು ಪ್ರಾರಂಭಿಸಿದರು, ಸಿಬ್ಬಂದಿಗಳು ನೀಡುವ ಕಿರುಕುಳ ನೀಡಲು ತಡೆಯಲಾಗದೆ, ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸರ್ಕಾರ ಮೈಕ್ರೋ ಪೈನಾನ್ಸ್ ರವರು ಸಾಲಗಾರರಿಗೆ ತೊಂದರೆ ಕೊಡಬಾರದು ಎಂದು ಖಡಕ್ ಸೂಚನೆ ನೀಡಿದ್ದರೂ, ಕಿರುಕುಳ ನೀಡುವ ಸಿಬ್ಬಂದಿಗಳ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಹಾಗೂ ಕುಟುಂಬಕ್ಕೆ ಆಧಾರವಾಗಿದ್ದ ಜಯರಾಮನನ್ನು ಕಳೆದು ಕೊಂಡ ನೊಂದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ . ಘಟನೆ ಸಂಬಂಧ ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx