ರಾಯಚೂರು: ರಾಜ್ಯದಲ್ಲಿ ಬಿರು ಬಿಸಿಲಿನ ತಾಪಕ್ಕೆ ರೈತನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರಲ್ಲಿ ನಡೆದಿದೆ.
ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದ ಹನುಮಂತು(45) ಎಂಬ ರೈತ, ಹೊಲದಲ್ಲಿ ಕೆಲಸಕ್ಕೆಂದು ತೆರಳಿದ್ದರು. ಹೊಲದಿಂದ ಬಣವೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಾಸ್ ಆದ ಬಳಿಕ, ನೀರು ಕುಡಿಯುತ್ತಿದ್ದಂತೆ ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ.
ರೈತ ಹನುಮಂತು ಬಿಸಿಲ ತಾಪಕ್ಕೆ ಬಸವಳಿದು ಕುಸಿದು ಬಿದ್ದು ಸಾವನ್ನಪ್ಪಿರೋದಾಗಿ ಹೇಳಲಾಗುತ್ತಿದೆ. ಈ ಹಠಾತ್ ರೈತ ಹನುಮಂತು ಸಾವಿನಿಂದಾಗಿ ಕುಟುಂಬಸ್ಥರು ಕಂಗಾಲಾಗಿದ್ದಾರೆ.
ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA