ಅಭಿವೃದ್ಧಿ ಗೆ ಹಣ ಇಲ್ಲ ಅಂತ ನೀವೇ ಶಾಸಕರಿಗೆ ಹೇಳಿದ್ದಿರಿ, ಉಪ ಮುಖ್ಯಮಂತ್ರಿ ಕೂಡ ಅಭಿವೃದ್ಧಿ ಗೆ ಹಣ ಕೇಳಬೇಡಿ ಅಂತ ಹೇಳಿದ್ದಾರೆ. ನಮ್ಮ ಸರ್ಕಾರ ಸದೃಢ ಆರ್ಥಿಕತೆ ಮಾಡಿದ್ದರಿಂದ ನೀವು ಗ್ಯಾರೆಂಟಿ ಗಳನ್ನು ಕೊಡುತ್ತಿದ್ದೀರಿ, ಅವುಗಳಲ್ಲಿಯೂ ಕೂಡ ಕಂಡಿಷನ್ ಹಾಕಿದ್ದೀರಿ, ಅಕ್ಕಿ ಕೊಡುತ್ತೇವೆಂದು ಕೊಡದೇ ನಿಮ್ಮ ವೈಫಲ್ಯ ಕೇಂದ್ರ ಸರ್ಕಾರದ ಮೇಲೆ ಹಾಕುತ್ತಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅವರು ಮಾತನಾಡಿ, ಗೃಹಜ್ಯೋತಿ ಯಲ್ಲಿ 200 ಯುನಿಟ್ ಕೊಡುತ್ತೆವೆ ಅಂತ ಹೇಳಿ ಸರಾಸರಿ ಅಂತ 43 ಯುನಿಟ್ ಕೊಡುತ್ತಿದ್ದೀರ, ಇದು ಜನರಿಗೆ ಮಾಡಿದ ಮೋಸ ಅಲ್ಲವಾ? ಗೃಹಲಕ್ಷ್ಮೀ ಇನ್ನೂ ಜಾರಿಗೆ ತರಲಿಕ್ಕೆ ಆಗಿಲ್ಲ. ಶಕ್ತಿ ಯೋಜನೆ ಅಡಿಯಲ್ಲಿ ಕೆಎಸ್ ಆರ್‌ಟಿಸಿ ಸಿಬ್ಬಂದಿಗೆ ಪೂರ್ಣ ಸಂಬಳ ಕೊಡಲಾಗುತ್ತಿಲ್ಲ. ಪೊಲಿಸರಿಗೆ ಸಂಬಳ ಕೊಡಲಿಕ್ಕೆ ಆಗುತ್ತಿಲ್ಲ. ನಾವು ಕೊವಿಡ್ ಸಂದರ್ಭದಲ್ಲೂ ಎಲ್ಲ ಉದ್ಯೋಗಿಗಳಿಗೆ ಪೂರ್ಣ ಸಂಬಳ ಕೊಟ್ಟಿದ್ದೆವು, ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜನರು ನಿಮಗೆ ಅಧಿಕಾರ ಕೊಟ್ಟಿದ್ದಾರೆ. ನೀವು ರಾಜ್ಯವನ್ನು ಹೇಗೆ ದಿವಾಳಿ ಮಾಡುತ್ತಿದ್ದೀರಾ ಅನ್ನುವುದನ್ನು ರಾಜ್ಯದ ಜನತೆ ಕೇಳುತ್ತಿದ್ದಾರೆ. ಅದಕ್ಕೆ ಉತ್ತರ ಕೊಡಿ ಎಂದು ಆಗ್ರಹಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


