nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026
    Facebook Twitter Instagram
    ಟ್ರೆಂಡಿಂಗ್
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯೂರು: ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
    ಜಿಲ್ಲಾ ಸುದ್ದಿ March 9, 2022

    ಹಿರಿಯೂರು: ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

    By adminMarch 9, 2022No Comments2 Mins Read
    mahila dinacharane

    ಹಿರಿಯೂರು: ತಾಲ್ಲೂಕಿನ ವಾಣಿ ಸಕ್ಕರೆ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಮಿತಿ, ಐ.ಕ್ಯೂ.ಎ.ಸಿ, ಎನ್.ಎಸ್.ಎಸ್., ಕ್ರೀಡೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್ ಹಾಗೂ ರೋವರ್ಸ್ ಸಹಯೋಗದಲ್ಲಿ   ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.

    ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಿರಿಯೂರು ತಾಲ್ಲೂಕಿನ ಶಾಸಕಿ ಪೂರ್ಣಿಮಾ ಶ್ರೀನಿವಾಸ್ , ಮಹಿಳಾ ದಿನಾಚರಣೆ ಕೇವಲ ಒಂದು ದಿನದ ಆಚರಣೆಯಾಗಿ ಉಳಿಯದೇ,  ಸಮಾಜದಲ್ಲಿ ಮಹಿಳೆಯರಿಗೆ ಉತ್ತಮ ಸ್ಥಾನಮಾನ, ಗೌರವ ಹಾಗೂ ಸ್ವಾತಂತ್ರ್ಯ ಸಿಗುವಂತಾಗಬೇಕು  ಎಂದು ಹೇಳಿದರು.

    ನಮ್ಮ ಭಾರತ ದೇಶದಲ್ಲಿ ಮಹಿಳೆಯರಿಗೆ ತಮ್ಮದೇ ಆದ  ಸ್ಥಾನಮಾನ, ಗೌರವಗಳಿದ್ದು, ಸಮಾಜದಲ್ಲಿ ಮಹಿಳೆಯರನ್ನು ಅತ್ಯಂತ ಗೌರವಪೂರ್ಣವಾಗಿ ಕಾಣಲಾಗುತ್ತಿದೆ. ಆದರೂ ನಮ್ಮ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಇನ್ನು ಅನೇಕ ಮೂಢನಂಬಿಕೆ ಆಚರಣೆಗಳು, ಕಟ್ಟುಪಾಡುಗಳಿದ್ದು, ಈ ಎಲ್ಲಾ ಆಚರಣೆಗಳು ಹಾಗೂ ಕಟ್ಟುಪಾಡುಗಳಿಂದ ಮಹಿಳೆಯರು ಹೊರಬರಬೇಕು  ಎಂದು ಕರೆ ನೀಡಿದರು.

    ಸಮಾಜದಲ್ಲಿ ಮಹಿಳೆಯರು ಮತ್ತು ಪುರುಷರು ಒಂದು ಕುಟುಂಬಕ್ಕೆ ಎರಡು ಕಣ್ಣುಗಳಿದ್ದಂತೆ,  ಆದರೂ, ಕೆಲವು ಸಂದರ್ಭದಲ್ಲಿ ಪುರುಷರಿಂದ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದ್ದು, ಮಹಿಳೆಯರ  ರಕ್ಷಣೆಗಾಗಿ ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಈ ಕಾನೂನಿನ ಸದುಪಯೋಗ ಪಡೆಯಬೇಕಲ್ಲದೆ, ಅದರ ದುರುಪಯೋಗವಾಗದಂತೆ ಎಚ್ಚರ ವಹಿಸಬೇಕು ಎಂದರು.

     ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಣಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಧರಣೇಂದ್ರಯ್ಯ ಮಾತನಾಡಿ, ಭಾರತೀಯರ ಭವ್ಯ ಇತಿಹಾಸ ಪರಂಪರೆಯಲ್ಲಿ ಅನಾದಿ ಕಾಲದಿಂದಲೂ ಮಹಿಳೆಯರ ಬಗ್ಗೆ ನಮ್ಮ ಸಮಾಜ ಅತ್ಯಂತ ಗೌರವ ಭಾವನೆ ಹೊಂದಿದ್ದು, ಇಂದಿನ ಆಧುನಿಕ ಜಗತ್ತಿನಲ್ಲಿ ಮಹಿಳೆಯರು ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮನ್ನು ಗುರುತಿಸಿಕೊಂಡು ಯಶಸ್ವಿಯಾಗಿರುವುದಕ್ಕೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಂತಹ ಜಾಗೃತಿ ಕಾರ್ಯಕ್ರಮಗಳೇ ಕಾರಣವಾಗಿವೆ ಎಂಬುದಾಗಿ ಹೇಳಿದರು.

    ಈ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಪ್ರೊ.ಹೆಚ್.ಎನ್.ನರಸಿಂಹಯ್ಯ, ನಗರಸಭೆ ಸದಸ್ಯರಾದ ಸಣ್ಣಪ್ಪ, ಸಿಡಿಸಿ ಸದಸ್ಯರುಗಳಾದ ಕಬಡ್ಡಿ ಶ್ರೀನಿವಾಸ್, ಆನಂದ ಶೆಟ್ಟರು, ಶೋಭಾ, ದೈಹಿಕ ಶಿಕ್ಷಣ ನಿರ್ದೇಶಕರಾದ ಹೆಚ್.ತಿಪ್ಪೇಸ್ವಾಮಿ, ಕನ್ನಡ ವಿಭಾಗ ಮುಖ್ಯಸ್ಥರಾದ ಪುಷ್ಪಲತಾ, ಅಧೀಕ್ಷಕರಾದ ಸೌಮ್ಯ, ರೂಪಶ್ರೀ, ಗೀತಾ, ಶಿವಲೀಲಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಹರಿಪ್ರಸಾದ್ ರೈ, ಮೇಲ್ವಿಚಾರಕರಾದ ಮಂಜುಳಾ ಸೇರಿದಂತೆ ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

    ವಿದ್ಯಾರ್ಥಿನಿ ಕುಮಾರಿ ವಿ.ನಿರ್ಮಲ ಪ್ರಾರ್ಥಿಸಿದರು. ಇತಿಹಾಸ ಸಹಾಯಕ ಪ್ರಾಧ್ಯಾಪಕರಾದ ಬಿ.ಇ.ಜಗನ್ನಾಥ್ ಸ್ವಾಗತಿಸಿದರು. ಇತಿಹಾಸ ಸಹ ಪ್ರಾಧ್ಯಾಪಕರಾದ ಡಾ.ಸಿದ್ಧಲಿಂಗಯ್ಯ, ವಂದಿಸಿದರು, ಕುಮಾರಿ ವಿದ್ಯಾರ್ಥಿನಿ ಕುಮಾರಿ ಸೃಷ್ಠಿ ಕಾರ್ಯಕ್ರಮ ನಿರೂಪಿಸಿದರು.

    ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ – ದಾವಣಗೆರೆ )


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


    Provided by
    Provided by
    admin
    • Website

    Related Posts

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ

    July 18, 2026

    ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್: ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರು ಕೆಲಸ ಹುಡುಕಿಕೊಂಡು ಬೇರೆ ನಗರಗಳಿಗೆ ವಲಸೆ…

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.