ಸಕಲೇಶಪುರ: ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕೆ ತೆರಳಿ ವಾಪಸ್ಸಾಗಿದ್ದ ವ್ಯಕ್ತಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಮಠಸಾಗರದಿಂದ ಬಾಳ್ಳುಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಬುಧವಾರ ನಡೆದಿದೆ.
ತಾಲೂಕಿನ ಮಠಸಾಗರ ಗ್ರಾಮದ ನಿವಾಸಿ ಎ. ಸ್ವಾಮಿ (53) ಮೃತಪಟ್ಟವರು ಎಂದು ತಿಳಿದು ಬಂದಿದ್ದು, ಇವರು ಕಳೆದ 25 ವರ್ಷಗಳಿಂದ ಕಾಫಿ ಮಂಡಳಿಯಲ್ಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕಳೆದ ರಾತ್ರಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ಸಂಸ್ಕಾರಕ್ಕೆ ತೆರಳಿ ವಾಪಸಾಗಿದ್ದರು. ಬುಧವಾರ ಮುಂಜಾನೆ ಮಠಸಾಗರದಿಂದ ಬಾಳ್ಳುಪೇಟೆ ಸಂಪರ್ಕಿಸುವ ರಸ್ತೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ದಾರಿ ಹೋಕರು ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ವಾಮಿ ಅವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಅವರ ಪುತ್ರ, ನಮ್ಮ ತಂದೆ ತುಂಬಾ ಸೌಮ್ಯ ಸ್ವಭಾವದವಾರಗಿದ್ದು ಯಾರೋ ಕೊಲೆ ಮಾಡಿ ಬಿಸಾಕಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ. ಘಟನೆ ಸಂಬಂಧ ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


