ಬೀದರ್: ರಾಜ್ಯವನ್ನು ನಶಾ ಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪದೊಂದಿಗೆ ಭಾಲ್ಕಿ ಉಪ-ವಿಭಾಗದ ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿರವರ ಮಾರ್ಗದರ್ಶನದಲ್ಲಿ ಕಮಲ ನಗರ ಪೊಲೀಸರು ಮಾದಕ ದ್ರವ್ಯ ವಿರೋಧಿ ದಿನಾಚರಣೆ ನಡೆಸಿದರು.
ಅಮರೇಶ ಸಿ.ಪಿ.ಐ ಕಮಲನಗರ ವೃತ್ತರವರ ನೇತೃತ್ವದಲ್ಲಿ ಚಂದ್ರಶೇಖರ, ಬಾಲಾಜಿ, ಪಿ.ಎಸ್.ಐ ಇವರು ಡೋಣಗಾಂವ್-ಎಮ್ ಗ್ರಾಮದಲ್ಲಿ ಮಾದಕ ದ್ರವ್ಯ ವಿರೋಧಿ Appನ್ನು ಸಾರ್ವಜನಿಕರಿಗೆ ಪರಿಚಯಿಸಿಕೊಟ್ಟರು.
ಕಮಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮುಕ್ತ ಮಾಡುವ ಸಲುವಾಗಿ ಈ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪೊಲೀಸರ ಕ್ರಮಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296