ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಬಗ್ಗೆ ಹಾದಿಬೀದಿಯಲ್ಲಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪಕ್ಷದ ಕಾರ್ಯಕರ್ತ ಶಿವಕುಮಾರ್ ಎಂಬುವರು ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದಿದ್ದಾರೆ.
ಮಂಡ್ಯದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಎಂಬುವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ರಕ್ತದ ಮೂಲಕ ಪತ್ರ ಬರೆದಿದ್ದು, ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ತಕ್ಷಣವೇ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ.
ಪತ್ರ ಚಳುವಳಿಯನ್ನು ಆರಂಭಿಸಿರುವ ಅವರು, ಯತ್ನಾಳ್ ಹಾಗೂ ಅವರ ತಂಡ ನಡೆಸುತ್ತಿರುವ ಜಾಗೃತಿ ಅಭಿಯಾನಕ್ಕೆ ಕಡಿವಾಣ ಹಾಕಬೇಕು. ಪಕ್ಷದ ವರಿಷ್ಠರು, ರಾಜ್ಯಾಧ್ಯಕ್ಷರ ಅನುಮತಿ ಪಡೆಯದೆ ಪಕ್ಷದ ಚಿಹ್ನೆಯನ್ನು ಬಳಸದೆ ಯಾವ ಆಧಾರದ ಮೇಲೆ ಅಭಿಯಾನ ನಡೆಸಲು ಅವಕಾಶ ಕೊಡಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಪಕ್ಷದ ಒಪ್ಪಿಗೆಯನ್ನು ಪಡೆಯದೆ ನಡೆಸುತ್ತಿರುವ ಈ ಅಭಿಯಾನಕ್ಕೆ ಕೂಡಲೇ ರಾಷ್ಟ್ರದ ನಾಯಕರು ಮಧ್ಯಪ್ರವೇಶ ಮಾಡಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಬೇಕು ಎಂದು ಕೋರಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx